ಮಂಗಳೂರು ; ಮೂಡಬಿದ್ರೆ ಕೋಟಿ-ಚೆನ್ನಯ ಕಂಬಳ ಉತ್ಸವ ಹಾಗೂ ವೀರರಾಣಿ ಅಬ್ಬಕ್ಕ ಪ್ರತಿಮೆ ಲೋಕಾರ್ಪಣೆ ಸಮಾರಂಭ ಡಿಸೆಂಬರ್ 25ರಂದು ಜರಗಿತು. ಈ ಸಂದರ್ಭ ಕಂಬಳ ಆವರಣದಲ್ಲಿ ನಿರ್ಮಾಣಗೊಂಡಿರುವ ವೀರರಾಣಿ ಅಬ್ಬಕ್ಕ ಪ್ರತಿಮೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಲೋಕಾರ್ಪಣೆ ಮಾಡಿದರು.
ಇದೇ ಸಂದರ್ಭದಲ್ಲಿ ಮೂಡಬಿದ್ರೆ ಕಡಲಕೆರೆ ನಿಸರ್ಗಧಾಮದಲ್ಲಿ 17ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ್ಯ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಮೂಡುಬಿದಿರೆ: ತುಳುನಾಡಿನ ಜಾನಪದ ಕ್ರೀಡೆ ಕಂಬಳ ಸುಪ್ರೀಂ ಕೋರ್ಟ್ನಲ್ಲಿ ತಾತ್ಕಾಲಿಕ ಜಯ ಗಳಿಸಿದೆ. ತುಳುವರ ಕೃಷಿಬದುಕಿನ ಪರಿಶ್ರಮ,ಸಂಭ್ರಮದ ಪ್ರತೀಕವಾದ ಕಂಬಳವನ್ನು ಉಳಿಸಿ ಬೆಳೆಸಲು ಸರಕಾರ ಬದ್ಧವಾಗಿದೆ ಎಂದು ಹೇಳಿದರು.
ಈ ಕಂಬಳ ಕ್ರೀಡಾಕೂಟಕ್ಕೆ ಯುವಜನಸೇವೆ ಮತ್ತು ಕ್ರೀಡಾ ಇಲಾಖೆಯಿಂದ 5 ಲಕ್ಷ ರೂ. ಬಿಡುಗಡೆ ಆಗಿದೆ. ಮೂಡಬಿದ್ರೆ ಕಡಲಕೆರೆಯನ್ನು ಪಿಲಿಕುಲ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಈಗಾಗಲೇ ಯೋಜನೆ ರೂಪಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ 5 ಕೋಟಿ ರೂ. ಮೊತ್ತದ ಯೋಜನೆ ಜಾರಿಗೆ ತರಲು ಈಗಾಗಲೇ ರೂಪುರೇಷೆ ಸಿದ್ಧಗೊಳಿಸಲಾಗಿದೆ. ಇದರಲ್ಲಿ ಕಡಲಕೆರೆ ಅಭಿವೃದ್ಧಿಗೆ ರೂ. 3 ಕೋಟಿ ಹಾಗೂ ಅಬ್ಬಕ್ಕ ಸಂಸ್ಕೃತಿ ಗ್ರಾಮ ನಿರ್ಮಾಣಕ್ಕೆ ರೂ. 2 ಕೋಟಿ ವೆಚ್ಚ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಇದೇ ವೇಳೆ ಮೂಡಬಿದ್ರೆ ಹಾಗೂ ಮೂಲ್ಕಿಯಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಪಟ್ಟ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಮಿತಿ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಮೂಡುಬಿದಿರೆ ತಾಲೂಕಿನ ಮೂಲ ಸೌಕರ್ಯಗಳಿಗಾಗಿ 100 ಕೋ. ರೂ. ಒದಗಿಸಬೇಕು ಎಂದು ಸಮಿತಿ ಅಧ್ಯಕ್ಷ ಹಾಗೂ ಶಾಸಕ ಉಮಾನಾಥ ಕೋಟ್ಯಾನ್ ಸಿಎಂ ಅವರಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಕಂಬಳ ಕ್ಷೇತ್ರದ ಸಾಧಕ, ಪ್ರಧಾನದ ತೀರ್ಪುಗಾರ ಕೆ. ಗುಣಪಾಲ ಕಡಂಬ ಅವರನ್ನು ಸಮ್ಮಾನಿಸಲಾಯಿತು
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಚಿವರಾದ ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ, ಸಿ.ಟಿ. ರವಿ, ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ರಾಜ್ಯ ಮುಖ್ಯ ಸಚೇತಕ ಸುನಿಲ್ ಕುಮಾರ್, ರಾಜ್ಯ ಕ್ರೈಸ್ತ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಜೋಯ್ಲಸ್ ಡಿ’ಸೋಜಾ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಪುತ್ತೂರು ವಿವೇಕಾನಂದ ವಿದ್ಯಾಲಯಗಳ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್, ಶಾಸಕರಾದ ಸಂಜೀವ ಮಠಂದೂರು, ವೇದವ್ಯಾಸ ಕಾಮತ್, ರಾಜೇಶ್ ನ್ಯಾಕ್, ಹರೀಶ್ ಪೂಂಜ, ವಾರ್ತಾಧಿಕಾರಿ ಖಾದರ್ ಷಾ, ಜಿ.ಪಂ. ಸದಸ್ಯರಾದ ಕೆ.ಪಿ ಸುಚರಿತ ಶೆಟ್ಟಿ, ತಹಶೀಲ್ದಾರ್ ಅನಿತಾಲಕ್ಷ್ಮೀ, ಕಂಬಳ ಸಮಿತಿಯ ಗೌರವ ಸಲಹೆಗಾರ, ಆಳ್ವಾಸ್ ಪ್ರವರ್ತಕ ಡಾ| ಎಂ. ಮೋಹನ ಆಳ್ವ, ಅದಾನಿ ಸಂಸ್ಥೆಯ ನಿರ್ವಾಹಕ ನಿರ್ದೇಶಕ ಮತ್ತು ಜಂಟಿ ಅಧ್ಯಕ್ಷ ಕಿಶೋರ್ ಆಳ್ವ, ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮಾಜಿ ಸಚಿವ ನಾಗರಾಜ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.
ಸುದರ್ಶನ್ ಎಂ., ಕೆ.ಪಿ. ಜಗದೀಶ ಅಧಿಕಾರಿ, ಸುರೇಶ್ ಕೆ. ಪೂಜಾರಿ, ಭಾಸ್ಕರ್ ಎಸ್. ಕೋಟ್ಯಾನ್, ಕೆ. ಕೃಷ್ಣರಾಜ ಹೆಗ್ಡೆ, ರಂಜಿತ್ ಪೂಜಾರಿ, ಮೇಘನಾದ ಶೆಟ್ಟಿ, ದೇವಪ್ರಸಾದ್ ಪುನರೂರು, ಭುವನಾಭಿರಾಮ ಉಡುಪ, ಇಂದು ಎಂ., ಅಮರ್ ಕೋಟೆ ಉಪಸ್ಥಿತರಿದ್ದರು.
Comments are closed.