ಲಕ್ನೋ: ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಹಿನ್ನೆಲೆಯಲ್ಲಿ ಉತ್ತರಪ್ರದೇಶದ 21 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.
ಪೊಲೀಸ್ ವರಿಷ್ಠಾಧಿಕಾರ ಪ್ರಕಟಣೆಯಲ್ಲಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ. ಅಲ್ಲದೇ ನಾವು ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸುತ್ತಿದ್ದೇವೆ. ರಾಜ್ಯದ ಒಟ್ಟು 75 ಜಿಲ್ಲೆಗಳಲ್ಲಿ ಸುಮಾರು 21 ಜಿಲ್ಲೆಯ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿದ್ದೇವೆ. ಪರಿಸ್ಥಿತಿ ಸಂಪೂರ್ಣ ಸಹಜಸ್ಥಿತಿಗೆ ಮರಳಿದ ನಂತರ ಇಂಟರ್ನೆಟ್ ಸೇವೆ ಪುನರಾರಂಭಿಸುವುದಾಗಿ ತಿಳಿಸಿದೆ.
ಶುಕ್ರವಾರದ ಪ್ರಾರ್ಥನೆಯ ನಂತರ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟ ಮತ್ತಷ್ಟು ಹಿಂಸಾಚಾರಕ್ಕೆ ತಿರುಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಈ ಮುನ್ನೆಚ್ಚರಿಕಾ ಕ್ರಮವನ್ನು ಕೈಕೊಂಡಿದೆ ಎಂದು ಪೊಲೀಸ್ ಮಹಾ ನಿರ್ದೇಶಕ ಒಪಿ ಸಿಂಗ್ ತಿಳಿಸಿದ್ದಾರೆ.
ಉತ್ತರಪ್ರದೇಶದ ಬಿಜ್ನೋರ್, ಬುಲಂದ್ ಶಹಾರ್, ಮುಝಾಫರ್ ನಗರ್, ಮೀರತ್, ಆಗ್ರಾ, ಫಿರೋಜಾಬಾದ್, ಸಂಭಾಲ್, ಅಲಿಗಢ್, ಗಾಜಿಯಾಬಾದ್, ರಾಂಪುರ್, ಸೀತಾಪುರ್ ಮತ್ತು ಕಾನ್ಪುರ್ ಗಳಲ್ಲಿ ಈಗಾಗಲೇ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು.
Comments are closed.