ರಾಷ್ಟ್ರೀಯ

ನಿರ್ಭಯಾ ಪ್ರಕರಣದ ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ದಿಲ್ಲಿ ಲೆ. ಗವರ್ನರ್

Pinterest LinkedIn Tumblr


ನವದೆಹಲಿ: ಮಹತ್ವದ ಬೆಳವಣಿಗೆ ಎಂಬಂತೆ 2012ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಮುಕೇಶ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ದಿಲ್ಲಿಯ ಲೆಫ್ಟಿನೆಂಟ್ ಗವರ್ನರ್ ಗುರುವಾರ ತಿರಸ್ಕರಿಸಿದ್ದು, ಮುಂದಿನ ನಿರ್ಧಾರಕ್ಕಾಗಿ ಕೇಂದ್ರ ಗೃಹ ಇಲಾಖೆಗೆ ಮನವಿಯನ್ನು ಕಳುಹಿಸಿರುವುದಾಗಿ ತಿಳಿಸಿದೆ.

ಮಾಧ್ಯಮ ವರದಿ ಪ್ರಕಾರ, ಮೊದಲು ಮುಕೇಶ್ ಕ್ಷಮಾದಾನ ಅರ್ಜಿಯನ್ನು ದಿಲ್ಲಿ ಸರ್ಕಾರ ವಜಾಗೊಳಿಸಿದ್ದು, ನಂತರ ಅರ್ಜಿ ವಜಾಗೊಳಿಸುವಂತೆ ಶಿಫಾರಸು ಮಾಡಿ ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ಗೆ ಕಳುಹಿಸಿಕೊಟ್ಟಿತ್ತು. ದಿಲ್ಲಿ ಸರ್ಕಾರದ ಶಿಫಾರಸ್ಸನ್ನು ಪರಿಗಣಿಸಿದ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಿಕೊಟ್ಟಿರುವುದಾಗಿ ವರದಿ ವಿವರಿಸಿದೆ.

ಜನವರಿ 22ರಂದು ಅಪರಾಧಿಗಳನ್ನು ಗಲ್ಲಿಗೇರಿಸಬಾರದು ಎಂದು ದಿಲ್ಲಿ ಸರ್ಕಾರ ಹೈಕೋರ್ಟ್ ಗೆ ತಿಳಿಸಿದ್ದು, ಈ ಸಂದರ್ಭದಲ್ಲಿ ಡೆತ್ ವಾರಂಟ್ ಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದ ನಂತರ ಈ ಬೆಳವಣಿಗೆ ನಡೆದಿದೆ ಎಂದು ವರದಿ ತಿಳಿಸಿದೆ.

Comments are closed.