ಚಂಡೀಗಢ್: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿ ಆಡಳಿತಾರೂಢ ಕಾಂಗ್ರೆಸ್ ನೇತೃತ್ವದ ಪಂಜಾಬ್ ಸರ್ಕಾರ ಶುಕ್ರವಾರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ ಎಂದು ವರದಿ ತಿಳಿಸಿದೆ.
ಪಂಜಾಬ್ ವಿಧಾನಸಭೆಯ ಎರಡು ದಿನಗಳ ವಿಶೇಷ ಅಧಿವೇಶನದಲ್ಲಿ ಶುಕ್ರವಾರ ಸಚಿವ ಮೋಹೀಂದರ್ ಅವರು ಸಿಎಎ ವಿರುದ್ಧ ನಿರ್ಣಯ ಮಂಡಿಸಿರುವುದಾಗಿ ವರದಿ ವಿವರಿಸಿದೆ.
ಇತ್ತೀಚೆಗಷ್ಟೇ ಪೌರತ್ವ ತಿದ್ದುಪಡಿ ಕಾಯ್ದೆ ರದ್ದುಪಡಿಸುವಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಕೇರಳ ವಿಧಾನಸಭೆಯಲ್ಲಿಯೂ ನಿರ್ಣಯ ಅಂಗೀಕರಿಸಿತ್ತು. ಇದೀಗ ಕೇರಳದ ನಂತರ ಸಿಎಎ ರದ್ದುಪಡಿಸುವಂತೆ ನಿರ್ಣಯ ಅಂಗೀಕರಿಸಿದ ಎರಡನೇ ರಾಜ್ಯ ಪಂಜಾಬ್ ಆಗಿದೆ.
ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರಗೊಂಡು ರಾಷ್ಟ್ರಪತಿ ಅಂಕಿತದೊಂದಿಗೆ ಕಾಯ್ದೆಯಾಗಿ ಜಾರಿಯಾಗುತ್ತಿದ್ದಂತೆಯೇ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಇದು ಧರ್ಮಾಧರಿತ ತಾರತಮ್ಯದಿಂದ ಕೂಡಿದ್ದು, ಸಂವಿಧಾನ ಬಾಹಿರವಾಗಿದೆ ಎಂದು ಸಚಿವ ಮೋಹೀಂದರ್ ತಿಳಿಸಿದ್ದಾರೆ.
Comments are closed.