ಕರಾವಳಿ

ಸ್ನಾತಕೋತ್ತರ ಪರೀಕ್ಷೆ : ಮಂಗಳೂರಿನ ಕಾರ್‌ಸ್ಟ್ರೀಟ್ ಸರಕಾರಿ ಕಾಲೇಜಿಗೆ 3 ರ್‍ಯಾಂಕ್

Pinterest LinkedIn Tumblr

ಮಂಗಳೂರು ಜನವರಿ 23 :ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ವಿವಿಧ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಡಾ.ಪಿ.ದಯಾನಂದ ಪೈ-ಪಿ.ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ರಥಬೀದಿಗೆ 3 ರ್‍ಯಾಂಕ್ ಗಳು ಲಭಿಸಿವೆ.

ರಾಜ್ಯಶಾಸ್ತ್ರ ಎಂ.ಎ ಯಲ್ಲಿ ಪೂಜಶ್ರೀ ಪ್ರಥಮ ರ್ಯಾಂಕ್ ಗಳಿಸಿದ್ದು, ಕಾಸರಗೋಡು ಜಿಲ್ಲೆಗೆ ಸೇರಿದ ವಿದ್ಯಾರ್ಥಿನಿಯಾಗಿರುವ ಇವರು ಇದೇ ಕಾಲೇಜಿನಲ್ಲಿ ಪದವಿ ಪರೀಕ್ಷೆಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಸ್ತುತ ಮೆರಿಟ್ ಕೋಟಾದಡಿ ಸರಕಾರಿ ಕಾಲೇಜಿನಲ್ಲಿ ಬಿ.ಎಡ್ ಪದವಿಯನ್ನು ಮುಂದುವರಿಸುತ್ತಿದ್ದಾರೆ.

ಎಂ.ಎಸ್.ಡಬ್ಲ್ಯೂ ಸ್ನಾತಕೋತ್ತರ ಪರೀಕ್ಷೆಯಲ್ಲಿ ಪೂಜಾ.ಕೆ ದ್ವಿತೀಯ ರ್ಯಾಂಕ್ ಪಡೆದಿದ್ದು, ಪ್ರಸ್ತುತ ಕ್ಯಾಲಿಕಟ್‍ನಲ್ಲಿ ಎಂ.ಬಿ.ಎ ಪದವಿಯನ್ನು ಮುಂದುವರಿಸುತ್ತಿದ್ದಾರೆ.

ಎಂ.ಕಾಂ.ನಲ್ಲಿ ಮೋನಿಷ ಶೆಟ್ಟಿ ನಾಲ್ಕನೇ ರ್ಯಾಂಕ್ ಗಳಿಸಿದ್ದು, ಪ್ರಸ್ತುತ ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‍ಮೆಂಟ್ ಕಾಲೇಜಿಲ್ಲಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.

Comments are closed.