ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ ವಿವಾದಕ್ಕೆ ಸಂಬಂಧಿಸಿ ವಿದ್ಯಾರ್ಥಿನಿ ಅಮೂಲ್ಯಾಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮದಲ್ಲಿರುವ 5ನೇ ಎಸಿಎಂಎ ನ್ಯಾಯಾಧೀಶ ಶಿರಿನ್ ಜೆ ಅನ್ಸಾರಿ ಅವರ ನಿವಾಸಕ್ಕೆ ರಾತ್ರಿ ಹಾಜರುಪಡಿಸಿದಾಗ, ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಫೆಬ್ರವರಿ 23ರವರೆಗೂ ನ್ಯಾಯಾಂಗ ಬಂಧನದಲ್ಲಿ ಇರುವ ಅಮೂಲ್ಯಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಹಿಂದು, ಮುಸ್ಲಿಂ, ಸಿಖ್, ಈಸಾಯಿ ಫೆಡರೇಷನ್ ನಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಆಯೋಜಿಸಲಾಗಿತ್ತು.
ಆಗಷ್ಟೇ ವೇದಿಕೆಗೆ ಬಂದಿದ್ದ ಎಐಎಂಐಎಂ ಸಂಸದ ಓವೈಸಿ, ಭಿತ್ತಿಪತ್ರ ಹಿಡಿದು ನಿಂತಿದ್ದ ಅಮೂಲ್ಯಗೆ ಮಾತನಾಡಲು ಆಹ್ವಾನ ನೀಡಲಾಗಿತ್ತು. ಮೈಕ್ ಸಿಗುತ್ತಿದ್ದಂತೆ ಪಾಕಿಸ್ತಾನ್ ಜಿಂದಾಬಾದ್ ಎಂದು ಅಮೂಲ್ಯ ಕೂಗಿದ್ದರು. ವೇದಿಕೆಯಲ್ಲಿದ್ದ ಓವೈಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಅಮೂಲ್ಯ ಅವರನ್ನು ಬಂಧನಕ್ಕೊಳಪಡಿಸಿದ್ದರು.
Comments are closed.