ಕರ್ನಾಟಕ

ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದ ಅಮೂಲ್ಯಗೆ ತಪ್ಪಿನ ಅರಿವಾಗುವಂತಹ ಶಿಕ್ಷೆ ನೀಡಬೇಕು: ಸಿದ್ದರಾಮಯ್ಯ

Pinterest LinkedIn Tumblr

ಬೆಂಗಳೂರು: ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದ ಅಮೂಲ್ಯಗೆ ತಪ್ಪಿನ ಅರಿವಾಗುವಂತಹ ಶಿಕ್ಷೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

“ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಖಂಡನೀಯ ನಡವಳಿಕೆ.ಪೊಲೀಸರು ಸರಿಯಾದ ತನಿಖೆ ನಡೆಸಿ ಆಕೆಗೆ ತನ್ನ ತಪ್ಪಿನ ಅರಿವಾಗುಂತಹ ಶಿಕ್ಷೆ ನೀಡಬೇಕು” ಎಂದು ಟ್ವೀಟ್ ಮಾಡಿದ್ದಾರೆ. ಗುರವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿ ಅಮೂಲ್ಯ ಲಿಯೋನಾ ಪಾಕಿಸ್ತಾನ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದಳು.

ಅಮೂಲ್ಯ ವರ್ತನೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ, ಅಮೂಲ್ಯಗೆ ಈ ಹಿಂದೆ ಮಾವೋವಾದಿಗಳ ಜೊತೆಗಿನ ನಂಟಿತ್ತುಎಂಬುವುದು ಸಾಬೀತಾಗಿದೆ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಕೂಡಾ ಅಮೂಲ್ಯ ವರ್ತನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಮೂಲ್ಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದ್ದು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Comments are closed.