ಹೊಸದಿಲ್ಲಿ: ಈಶಾನ್ಯ ದಿಲ್ಲಿಯಲ್ಲಿ ಗುಂಪುಗಳ ನಡುವೆ ನಡೆದ ಹಿಂಸಾಚಾರದಲ್ಲಿ ಇದುವರೆಗೆ ಸುಮಾರು 42 ಜನರು ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ.
ಸಾವಿನ ಸಂಖ್ಯೆ 42ಕ್ಕೇರಿದೆ ಎಂದು ತೇಜ್ ಬಹದ್ದೂರ್ ಆಸ್ಪತ್ರೆ ಮೂಲಗಳು ತಿಳಿಸಿವೆ ಎಂದು ಆಂಗ್ಲ ಮಾಧ್ಯಮ ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.
ಸದ್ಯ ದಿಲ್ಲಿ ಸಹಜ ಸ್ಥಿತಿಯತ್ತ ಮರಳುತ್ತಿದೆ. ಸ್ಥಳದಲ್ಲಿ ಸುಮಾರು 7000ಕ್ಕೂ ಹೆಚ್ಚಿನ ಪ್ಯಾರಾ ಮಿಲಿಟರಿ ಪಡೆಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. ಗಲಭೆ ನಡೆದ ಸ್ಥಳಗಳಲ್ಲಿ ಸದ್ಯ ನಿಧಾನವಾಗಿ ಅಂಗಡಿ ಮುಂಗಟ್ಟುಗಳನ್ನು ತೆರೆಯಲಾಗುತ್ತಿದೆ.
ದೆಹಲಿ ಹಿಂಸಾಚಾರದಲ್ಲಿ ಸಾವಿಗೀಡಾಗಿದ್ದ ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಅವರ ಅಂತ್ಯ ಸಂಸ್ಕಾರ ಇಂದು ನಡೆಯಿತು. ಕೇಂದ್ರ ಸಚಿವ ಸಂಜೀವ್ ಬಾಲ್ಯನ್ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು.
Comments are closed.