ಬೆಂಗಳೂರು: ಅಕಾಲಿಕ ನಿಧನ ಹೊಂದಿದ್ದ ನಾಲ್ವರು ಪತ್ರಕರ್ತರ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪರಿಹಾರ ಘೋಷಣೆ ಮಾಡಿದ್ದಾರೆ.
ಪತ್ರಕರ್ತರ ನಿಯೋಗ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಪರಿಹಾರ ನೀಡುವಂತೆ ಮನವಿಯನ್ನು ಸಲ್ಲಿಸಿತ್ತು. ಪತ್ರಕರ್ತರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶನಿವಾರದಂದು ಈ ಪರಿಹಾರ ಘೋಷಣೆ ಮಾಡಿದ್ದಾರೆ.
ಇತ್ತೀಚೆಗೆ ನಿಧನ ಹೊಂದಿದ್ದ ಪತ್ರಕರ್ತರಾದ ಗಜಾನನ ಹೆಗಡೆ, ಬಿ ಆರ್ ರೋಹಿತ್, ರವಿರಾಜ ವಳಲಂಬೆ, ದಿಗಂಬರ ಗರುಡಾ ಇವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಸಿಎಂ ಬಿ.ಎಸ್. ಯಡಿಯೂರಪ್ಪ ಪರಿಹಾರ ಘೋಷಣೆ ಮಾಡಿದ್ದಾರೆ.
ಪತ್ರಕರ್ತರ ಅಕಾಲಿಕ ನಿಧನವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ನೆರವು ನೀಡುವಂತೆ ಮುಖ್ಯಮಂತ್ರಿಯವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಪತ್ರಕರ್ತರ ಈ ನಿಯೋಗದಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ನ ಅಧ್ಯಕ್ಷರಾಗಿರುವ ಹಿರಿಯ ಪತ್ರಕರ್ತ ಕೆ. ಸದಾಶಿವ ಶೆಣೈ, ಪ್ರಧಾನ ಕಾರ್ಯದರ್ಶಿ ಹೆಚ್.ಎ. ಕಿರಣ್ ಸಹಿತ ಹಲವರು ಹಾಜರಿದ್ದರು.
Comments are closed.