ಬೆಂಗಳೂರು/ಉಡುಪಿ: ಕೊರೊನಾ ವೈರಸ್ ಭೀತಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಲ್ಲಿ ನರ್ಸರಿ ಮಕ್ಕಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ರಜಾ ಘೋಷಿಸಿದ ಬೆನ್ನಲ್ಲೇ ಇದೀಗ ರಾಜ್ಯ ಸೇರಿದಂತೆ ಅವಿಭಜಿತ ದ.ಕ. ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಮಾ. 23ರೊಳಗೆ ವಾರ್ಷಿಕ ಪರೀಕ್ಷೆಗಳನ್ನು ಮುಗಿಸಬೇಕು ಎಂಬುದಾಗಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ.
ಜಿಲ್ಲೆಯ ಎಲ್ಲ ಖಾಸಗಿ, ಅನುದಾನಿತ, ಅನುದಾನರಹಿತ ಹಾಗೂ ಸರಕಾರಿ ಶಾಲೆಗಳಿಗೆ ಇದು ಅನ್ವಯವಾಗಲಿದೆ.
1 ರಿಂದ 5 ನೇ ತರಗತಿವರೆಗಿನ ವಾರ್ಷಿಕ/ಸೆಮಿಸ್ಟರ್ ಪರೀಕ್ಷೆಗಳನ್ನು ಮಾರ್ಚ್ 16 ರ ಒಳಗೆ ಹಾಗೂ 6 ರಿಂದ 9 ನೇ ತರಗತಿ ಪರೀಕ್ಷೆಗಳನ್ನು ಮಾರ್ಚ್ 23 ರ ಒಳಗೆ ಕಡ್ಡಾಯವಾಗಿ ಎಲ್ಲಾ ವಾರ್ಷಿಕ ಪರೀಕ್ಷೆಮುಗಿಸಿ ರಜೆ ಘೋಷಿಸುವಂತೆ ಎಲ್ಲಾ ಬಿಇಒಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ರವಾನೆ ಮಾಡಿದೆ. ಇಂದಿನಿಂದಲೇ ಪರೀಕ್ಷೆ ಆರಂಭ ಸಾಧ್ಯತೆಯಿದೆ.
ಕೊರೊನಾ ಭೀತಿ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಶಿಕ್ಷಣ ಇಲಾಖೆ ಈ ನಿರ್ಧಾರ ಕೈಗೊಂಡಿದ್ದು, ಧಿಡೀರ್ ಪರೀಕ್ಷೆ ಎದುರಾಗುವ ಹಿನ್ನಲೆಯಲ್ಲಿ ಶಾಲಾ ಶಿಕ್ಷಕರು , ವಿದ್ಯಾರ್ಥಿಗಳು ಹಾಗೂ ಪೋಷಕರು ತಲೆಕೆಡಿಸಿಕೊಳ್ಳುವಂತಾಗಿದೆ. ಇನ್ನು ಪೂರ್ವ ನಿಗದಿಯಂತೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದೆ. ಯಾವುದೇ ವಿದ್ಯಾರ್ಥಿ ಜ್ವರ ,ಕೆಮ್ಮು ನೆಗಡಿ ಅಥವಾ ಇತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೆ ಅಂತಹ ವಿದ್ಯಾರ್ಥಿಗೆ ಆರೋಗ್ಯ ಮತ್ತು ಕುಟುಂಬ ಇಲಾಖೆಯ ವತಿಯಿಂದ ತಕ್ಷಣವೇ ಸೂಕ್ತ ಚಿಕಿತ್ಸೆ ನೀಡಿ ಕಡ್ದಾಯ ರಜೆ ಘೋಷಿಸಬೇಕು ಎಂದು ಇಲಾಖೆಯ ಸುತ್ತೋಲೆಯಲ್ಲಿ ತಿಳಿಸಿದೆ.
Comments are closed.