ಕರ್ನಾಟಕ

ರಾಜ್ಯದಲ್ಲಿ 4 ಮಂದಿಗೆ ಕೊರೊನಾ ವೈರಸ್ ಸೋಂಕು!

Pinterest LinkedIn Tumblr


ಬೆಂಗಳೂರು: ಕರ್ನಾಟಕದಲ್ಲಿ ಒಟ್ಟು ನಾಲ್ಕು ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ ಎಂಬ ಬೆಚ್ಚಿಬೀಳಿಸುವ ಮಾಹಿತಿಯನ್ನು ರಾಜ್ಯ ಆರೋಗ್ಯ ಸಚಿವ ಬಿ.ಶ್ರೀರಾಮುಲು ನೀಡಿದ್ದಾರೆ. ಈ ನಾಲ್ವರಲ್ಲಿ ಇಬ್ಬರು ಬೆಂಗಳೂರಿನವರಾಗಿದ್ದು, ಒಟ್ಟು ನಾಲ್ಕು ಜನರಿಗೆ ಈ ವೈರಸ್ ಸೋಂಕು ಪಸರಿಸಿದೆ. ಇದಕ್ಕೂ ಮೊದಲು ಸೋಮವಾರ ಅಮೇರಿಕಾದಿಂದ ಬೆಂಗಳೂರಿಗೆ ಬಂದಿಳಿದಿದ್ದ 40 ವರ್ಷದ ಟೆಕ್ಕಿಯೋಬ್ಬನಿಗೆ ಕೊರೊನಾ ವೈರಸ್ ಸೋಂಕು ಪಸರಿಸಿದೆ ಎಂಬ ಸುದ್ದಿ ಹೊರಬಂದಿತ್ತು. ಆತನನ್ನು ಬೆಂಗಳೂರಿನ ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಚೆಸ್ಟ್ ಡಿಸೀಜ್ (RGICD)ಗೆ ಭರ್ತಿ ಮಾಡಲಾಗಿದ್ದು, ಆತನ ಆರೋಗ್ಯ ಸ್ಥಿತಿ ಸದ್ಯ ಸ್ಟೇಬಲ್ ಆಗಿದೆ ಎನ್ನಲಾಗುತ್ತಿದೆ.

ಕರ್ನಾಟಕದಲ್ಲಿ ಇದುವರೆಗೆ 4 ವ್ಯಕ್ತಿಗಳಲ್ಲಿ #COVID19 ಸೋಂಕು ದೃಢಪಟ್ಟಿದ್ದು, ಅವರನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ನಾಗರಿಕರು ಮುಂಜಾಗೃತ ಕ್ರಮ ವಹಿಸಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಕೋರುತ್ತೇನೆ #CoronavirusOutbreak

ಇಂದು ಬೆಳಗ್ಗೆ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯ ಮೂಲಕ ಟ್ವೀಟ್ ಮಾಡಿರುವ ರಾಜ್ಯ ಆರೋಗ್ಯ ಸಚಿವ ಬಿ. ಶ್ರೀರಾಮುಲು, ” ಕರ್ನಾಟಕದಲ್ಲಿ ಇದುವರೆಗೆ 4 ವ್ಯಕ್ತಿಗಳಲ್ಲಿ #COVID19 ಸೋಂಕು ದೃಢಪಟ್ಟಿದ್ದು, ಅವರನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ನಾಗರಿಕರು ಮುಂಜಾಗೃತ ಕ್ರಮ ವಹಿಸಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಕೋರುತ್ತೇನೆ #CoronavirusOutbreak” ಎಂದು ಹೇಳಿದ್ದಾರೆ. ಇನ್ನೊಂದೆಡೆ ಕೇರಳದಲ್ಲಿಯೂ ಕೂಡ 6 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಮೂಲಗಳು ಮಾಹಿತಿ ನೀಡಿವೆ.

Comments are closed.