ಕರಾವಳಿ

ಮಹಿಳೆಯರು ಇಂದು ಎಲ್ಲಾ ರಂಗಗಳಲ್ಲಿಯೂ ಪುರುಷರಿಗೆ ಸರಿಸಮಾನರಾಗಿದ್ದಾರೆ : ನ್ಯಾಯಾಧೀಶೆ ಶಿಲ್ಪ ಎ.ಜಿ

Pinterest LinkedIn Tumblr

ಮಂಗಳೂರು ಮಾರ್ಚ್21: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಗಳೂರು ಹಾಗೂ ಪೊಲೀಸ್ ಇಲಾಖೆ, ಮಂಗಳೂರು ಇವರ ಜಂಟೀ ಆಶ್ರಯದಲ್ಲಿ ಜರುಗಿದ ಸರ್ಕಾರಿ ಸಿಬ್ಬಂದಿಗಳಿಗೆ, ಸಮುದಾಯ ಪೊಲೀಸ್ ಸ್ವಯಂ ಸೇವಕರಿಗೆ ತರಬೇತಿ ಕಾರ್ಯಕ್ರಮವನ್ನು ಮಂಗಳೂರಿನ ಕದ್ರಿಯಲ್ಲಿರುವ ಬಾಲಭವನ ಸಂಭಾಂಗಣದಲ್ಲಿ ಇತ್ತೀಚಿಗೆ ನಡೆಯಿತು.

ಕಾರ್ಯಕ್ರಮ ಉದ್ಫಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪ ಎ.ಜಿ., ಹಿಂದೆ ಮಹಿಳೆಯರು ನಾಲ್ಕು ಗೋಡೆಗಳ ನಡುವೆ ಬಂಧಿಗಳಾಗಿ ಕೌಟುಂಬಿಕ ಜೀವನ ನಡೆಸುತ್ತಿದ್ದರು, ಆದರೆ ಇಂದು ಜೀವನ ಎಲ್ಲಾ ರಂಗಗಳಲ್ಲಿಯೂ ಪುರುಷರಿಗೆ ಸರಿಸಮಾನರಾಗಿದ್ದು, ರಾಜಕೀಯ, ಸಾಮಾಜಿಕ ಶಿಕ್ಷಣ, ಬಾಹ್ಯಾಕಾಶ ವಿಜ್ಞಾನ ಮತ್ತು ಆರ್ಥಿಕ ಮುಂತಾದ ಕ್ಷೇತ್ರಗಳಲ್ಲಿ ದುಡಿಯುತ್ತಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ಮಹಿಳಾ ಮತ್ತು ಮಕ್ಕಳಾ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಉಸ್ಮಾನ್ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳಾ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ಸಂಯೋಜಕಿ ಆರತಿ ಹಾಗೂ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Comments are closed.