ಮಂಗಳೂರು ಮಾರ್ಚ್ 23 ; ಕೋವಿಡ್-19 (ಕೋರೊನಾ ವೈರಾಣು ಕಾಯಿಲೆ-2019)ಯ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ದಕ್ಷಿಣ ಕನ್ನಡ-ಕೇರಳ ರಾಜ್ಯದ ಕಾಸರಗೋಡು ಗಡಿಭಾಗದಲ್ಲಿ ಸಂಚರಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಮಾರ್ಚ್ 31 ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ.
ಆದರೆ, ತುರ್ತು ಸೇವೆಗಳ ವಾಹನಗಳು ಮತ್ತು ಅವಶ್ಯಕ ವಸ್ತುಗಳ ಕಾಯಿದೆ 1955 ರಡಿಯಲ್ಲಿ ನಮೂದಿಸಿರುವ ಅವಶ್ಯಕ ವಸ್ತುಗಳ ಸಾಗಾಣಿಕೆಯ ವಾಹನಗಳನ್ನು ಮಾತ್ರ ತಲಪಾಡಿ ಚೆಕ್ ಪೋಸ್ಟ್ ಮೂಲಕ ಸಂಚರಿಸಲು ಅವಕಾಶ ನೀಡಲಾಗಿದೆ.
ಮಂಗಳೂರು ಹಳೆ ಬಂದರಿಗೆ ಆಗಮಿಸುವ ಎಲ್ಲಾ ರೀತಿಯ ಪ್ಯಾಸೆಂಜರ್ ನಾವೆಗಳ ಆಗಮನ ಮತ್ತು ನಿರ್ಗಮನವನ್ನು ಮಾರ್ಚ್ 31 ರ ಮಧ್ಯರಾತ್ರಿ 12 ಗಂಟೆಯವರೆಗೆ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
Comments are closed.