ನವದೆಹಲಿ:ಕೋವಿಡ್ 19 ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಜನರು ಒಂದು ವೇಳೆ ಲಾಕ್ ಡೌನ್ ಉಲ್ಲಂಘಿಸುವುದನ್ನು ಮುಂದುವರಿಸಿದಲ್ಲಿ ಸರ್ಕಾರ ರಾಜ್ಯದಲ್ಲಿ ಕರ್ಫ್ಯೂ ಜಾರಿಗೊಳಿಸಿ, ಶೂಟ್ ಎಂಡ್ ಸೈಟ್(ಕಂಡಲ್ಲಿ ಗುಂಡು) ಆದೇಶ ಹೊರಡಿಸಬೇಕಾಗುತ್ತದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಅಮೆರಿಕದಲ್ಲಿ ಲಾಕ್ ಡೌನ್ ಜಾರಿಯಾದರೂ ಜನರನ್ನು ನಿಯಂತ್ರಿಸಲು ಸೇನೆಯನ್ನು ಕರೆಯಲಾಗಿತ್ತು. ಒಂದು ವೇಳೆ ಜನರು ಲಾಕ್ ಡೌನ್ ಆದೇಶ ಪಾಲಿಸದೇ ಪರಿಸ್ಥಿತಿ ಕೈಮೀರುವಂತೆ ಮಾಡಿದಲ್ಲಿ 24ಗಂಟೆಯೂ ಕರ್ಫ್ಯೂ ವಿಧಿಸಿ ಕಂಡಲ್ಲಿ ಗುಂಡು ಹೊಡೆಯುವ ಆದೇಶ ನೀಡಬೇಕಾಗುತ್ತದೆ.
ಈ ನಿಟ್ಟಿನಲ್ಲಿ ನಾನು ಜನರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ದಯವಿಟ್ಟು ಅಂತಹ ಸ್ಥಿತಿಗೆ ಅವಕಾಶ ಕೊಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ 21 ದಿನಗಳ ಕಾಲ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ಒಂದು ಗಂಟೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಚಂದ್ರಶೇಖರ್ ಈ ಎಚ್ಚರಿಕೆ ನೀಡಿದ್ದಾರೆ.
Comments are closed.