ಮೈಸೂರು: ರಾಜ್ಯದಲ್ಲಿ ಮತ್ತೆ ಐವರಲ್ಲಿ ಕೊರೊನಾ ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 82ಕ್ಕೆ ಏರಿಕೆಯಾಗಿದೆ
ಮೈಸೂರಿನ ನಂಜನಗೂಡಿನ ಸೋಂಕಿತನ ಜೊತೆ ಸಂಪರ್ಕ ಹೊಂದಿದ್ದ ಐವರಲ್ಲಿ ಕೊರೊನಾ ಕಂಡು ಬಂದಿದೆ. ಮೊದಲಿಗೆ ಜುಬಿಲೆಟ್ಸ್ ಕಾರ್ಖಾನೆಯ ಉದ್ಯೋಗಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಒಂದೇ ಕಾರ್ಖಾನೆಯ ಐವರಲ್ಲಿ ಕೊರೊನಾ ಸೋಂಕು ದೃಢಪಟ್ಟಿರೋದು ಆತಂಕಕ್ಕೆ ಕಾರಣವಾಗಿದೆ. ಮೊದಲ ಸೋಂಕಿತನಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕೊರೊನಾ ಮೂರನೇ ಸ್ಟೇಜ್ ತಲುಪಿತಾ ಎಂಬ ಪ್ರಶ್ನೆ ಕಾಡುತ್ತಿದೆ.
ಕಾರ್ಖಾನೆಯ ಸಿಬ್ಬಂದಿಯ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಒಟ್ಟು ಮೈಸೂರು ಜಿಲ್ಲೆಯಲ್ಲಿಯೇ 8 ಜನರಿಗೆ ಸೋಂಕು ದೃಢಪಟ್ಟಿದೆ. ಇಂದು ಮಧ್ಯರಾತ್ರಿಯಿಂದಲೇ ನಂಜನಗೂಡು ನಗರವನ್ನು ಸಂಪೂರ್ಣವಾಗಿ ಲಾಕ್ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ನಂಜನಗೂಡಿಗೆ ಒಳ ಮತ್ತು ಹೊರ ಹೋಗುವ ಎಲ್ಲ ವಾಹನಗಳ ಮೇಲೆ ನಿರ್ಬಂಧ ಹಾಕಲಾಗುತ್ತಿದೆ. ನಂಜನಗೂಡಿಗೆ ಸಂಪರ್ಕ ಕಲ್ಪಿಸುವ ಎಲ್ಲ ಮಾರ್ಗಗಳನ್ನು ಬಂದ್ ಮಾಡಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.
Comments are closed.