ಕುಂದಾಪುರ: ಕೋವಿಡ್-19 ಕೊರೋನಾ ವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದೆ. ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವಿಕೆ ಹಿನ್ನಲೆಯಲ್ಲಿ ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಸಭೆ ಸಮಾರಂಭಗಳು ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ನಿಷೇಧಿಸಿ ಹೊರಡಿಸಿರುವ ಆದೇಶವ ಮಾಡಲಾಗಿದೆ. ಆದರೂ ಆದೇಶ ಉಲ್ಲಂಘಿಸಿ, ಚರ್ಚ್‌ನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ನಾಡ ಗ್ರಾಮದ ಪಡುಕೋಣೆ ಸಂತ ಅಂತೋನಿ ಚರ್ಚ್‌ನಲ್ಲಿ ಜನರು ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿರುವ ಬಗ್ಗೆ ಸಾರ್ವಜನಿಕ ದೂರವಾಣಿ ಕರೆಯ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆ ಸಮಯ ಸಂತ ಅಂತೋನಿ ಚರ್ಚ್ ನಲ್ಲಿ ಪಾದರ್ ಫ್ರೆಡ್ ಮಸ್ಕರಿಯನ್ ಹಾಗೂ ಇತರ 6 ಜನರು ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದು ಸಿ.ಆರ್.ಪಿ.ಸಿ ಕಲಂ 144(3) ಉಲ್ಲಂಘನೆ ಮಾಡಿರುವುದು ದೃಢಪಟ್ಟಿದೆ. ಉಡುಪಿ ಜಿಲ್ಲೆಯಲ್ಲಿ ಕೋವಿಡ್-19ಸೋಂಕು ತಡೆಗಟ್ಟುವಿಕೆ ಹಿನ್ನಲೆಯಲ್ಲಿ ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಸಭೆ ಸಮಾರಂಭಗಳು ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ನಿಷೇಧಿಸಿ ಹೊರಡಿಸಿರುವ ಆದೇಶವನ್ನು ಉಲ್ಲಂಘಿಸಿ, ಚರ್ಚ್‌ನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದರಿಂದ ಬೈಂದೂರು ತಹಶಿಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಬಸಪ್ಪ ಪಿ. ಪೂಜಾರಿ ಅವರು ನೀಡಿದ ದೂರಿನಂತೆ ಸಂತ ಅಂತೋನಿ ಚರ್ಚ್ ಪಾದರ್ ಫ್ರೆಡ್ ಮಸ್ಕರಿಯನ್ ಹಾಗೂ ಇತರ 6 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 188, 269 ಜೊತೆಗೆ 149 ಪಿ.ಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.