ಮಂಗಳೂರು, ಎಪ್ರಿಲ್.16 : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಲಾಕ್ಡೌನ್ ಉಲ್ಲಂಘನೆ ಮಾಡಿ ಸಂಚರಿಸುತ್ತಿದ್ದ 106 ವಾಹನಗಳನ್ನು ಮಂಗಳೂರು ನಗರ ಪೊಲೀಸರು ವಶಪಡಿಸಿಕೊಂಡು ಕೇಸು ದಾಖಲಿಸಿದ್ದಾರೆ.
ಕೊರೋನ ವೈರಸ್ ತಡೆಗಟ್ಟುವ ಸಲುವಾಗಿ ದೇಶದಲ್ಲಿ ಸಂಪೂರ್ಣ ಲಾಕ್ಡೌನ್ ಆದೇಶ ಜಾರಿಯಲ್ಲಿದ್ದು, ದ.ಕ.ಜಿಲ್ಲಾದ್ಯಂತ ಸೆ.144 (3)ನ್ನು ವಿಧಿಸಲಾಗಿದೆ. ಆದರೂ ಲಾಕ್ ಡೌನ್ ಉಲ್ಲಂಘಿಸಿ ಬುಧವಾರ ವಾಹನ ಚಲಾಯಿಸಿದ ಹಲವಾರು ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿ ಸುಮಾರು 106 ವಾಹನಗಳನ್ನು ಮುಟ್ಟುಗೋಲು ಹಾಕಲಾಗಿದೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ನಗರದ ಹಲವೆಡೆಗಳಲ್ಲಿ ಅನಗತ್ಯವಾಗಿ ಸಂಚರಿಸಿದ ಕಾರಣ ಕಾರು, ರಿಕ್ಷಾ, ಬೈಕ್ ಸಹಿತ ಹಲವು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೊರೋನ ವೈರಸ್ ತಡೆಯುವ ನಿಟ್ಟಿನಲ್ಲಿ ದೇಶದಲ್ಲಿ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಜಿಲ್ಲಾಡಳಿತ ನಿರ್ಧರಿಸಿದೆ.
ಅಗತ್ಯ ಸಾಮಗ್ರಿಗಳನ್ನು ಮನೆ ಬಾಗಿಲಿಗೆ ಕೊಂಡೊಯ್ಯವ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಲು ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಂಡಿದ್ದು, ಅನಗತ್ಯವಾಗಿ ತಿರುಗಾಡುವ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಲಾಕ್ಡೌನ್ ಹಿನ್ನೆಲೆಯಲ್ಲಿ ಬಿಗು ತಪಾಸಣೆ ನಡೆಸಲಾಗುತ್ತಿದ್ದು, ನಿಯಮ ಉಲ್ಲಂಘನೆ ಮಾಡಿದ ದ್ವಿಚಕ್ರ, ರಿಕ್ಷಾ, ಹಾಗೂ ಚತುಶ್ಚಕ್ರ ವಾಹನಸೇರಿದಂತೆ ಒಟ್ಟು 106 ವಾಹನಗಳ ಮೇಲೆ ಕೇಸು ದಾಖಲಿಸಲಾಗಿದೆ. ಇದರಲ್ಲಿ ಸಂಚಾರ ಪೊಲೀಸರು 57 ಮತ್ತು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸರು 49 ವಾಹನಗಳನ್ನು ವಶಪಡಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ. ಪಿ.ಎಸ್. ಹರ್ಷ ನಿರ್ದೇಶನದಂತೆ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಲಕ್ಷ್ಮೀ ಗಣೇಶ್ ಮತ್ತು ಸಂಚಾರ ವಿಭಾಗದ ಎಸಿಪಿ ಮಂಜುನಾಥ್ ಶೆಟ್ಟಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
Comments are closed.