ಉಡುಪಿ: ಕೋವಿಡ್-19 ಕೋರೋನ ವೈರಸ್ ಎಂಬ ಮಹಾಮಾರಿ ದೇಶಾದ್ಯಂತ ವ್ಯಾಪಕವಾಗಿ ಹರಡಿದ್ದು ಮನುಕುಲಕ್ಕೆ ಸಂಕಷ್ಟವನ್ನು ಉಂಟುಮಾಡಿದೆ. ಈ ನಿಟ್ಟಿನಲ್ಲಿ ಪರಿಹಾರ ಹಾಗೂ ಮುಂಜಾಗೃತ ಕ್ರಮಗಳು ಸಮರೋಪಾದಿಯಲ್ಲಿ ಸಾಗುತ್ತಿವೆ.
ಕೋರೋನ ವೈರಸ್ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ 2.50 ಲಕ್ಷ ರೂಪಾಯಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ 2.50 ಲಕ್ಷ ರೂಪಾಯಿ ಚೆಕ್ಕನ್ನು ದೇಣಿಗೆ ರೂಪವಾಗಿ ಖ್ಯಾತ ವೈದ್ಯ ನಾಗಾನಂದ ಭಟ್, ಧರ್ಮ ಪತ್ನಿಯಾದ ಸುವರ್ಣ ಭಟ್ ಹಾಗೂ ಮಗನಾದ ಆಶ್ಲೇಷ ಭಟ್ ಅಂಬಲಪಾಡಿ ಇವರು ಉಡುಪಿಯ ಶಾಸಕರಾದ ಕೆ ರಘುಪತಿ ಭಟ್ ಇವರ ಸಮ್ಮುಖದಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ರವರಿಗೆ ಹಸ್ತಾಂತರಿಸಿದರು.
ಈ ಮಹತ್ತರ ಕೊಡುಗೆಗೆ ಶಾಸಕ ಕೆ. ರಘುಪತಿ ಭಟ್ ಇವರು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿ ವಿಶೇಷ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
Comments are closed.