ಕರಾವಳಿ

ಕೊರೋನಾ ದಿಂದ ಮೃತಪಟ್ಟ ಮಹಿಳೆಯ ಅತ್ತೆಗೆ ಐಸಿಯುವಿನಲ್ಲಿ ಚಿಕಿತ್ಸೆ : ಬಂಟ್ವಾಳ ಕೆಳಗಿನ ಪೇಟೆ ಸಂಪೂರ್ಣ ಸೀಲ್ ಡೌನ್

Pinterest LinkedIn Tumblr

ಮಂಗಳೂರು: ಮಂಗಳೂರಿನಲ್ಲಿ ಕೊರೋನಾ ಸೋಂಕಿನಿಂದ ಬಂಟ್ವಾಳದ ಮಹಿಳೆಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಬಂಟ್ವಾಳ ಕೆಳಗಿನ ಪೇಟೆಯಿಂದ ಜಕ್ರಿಬೆಟ್ಟುವಿನವರೆಗೆ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಈ ನಡುವೆ ಮೃತ ಮಹಿಳೆಯ ಅತ್ತೆ ಹಾಗೂ ಪಕ್ಕದ ಮನೆಯ ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲಾಗಿರುವುದು ಬೆಳಕಿಗೆ ಬಂದಿದೆ.

ಮೃತ ಮಹಿಳೆಯ ಅತ್ತೆ ಇತ್ತೀಚೆಗೆ ಕಾಲು ಜಾರಿ ಬಿದ್ದಿದ್ದು, ಗಂಭೀರ ಗಾಯಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ ಮೂರು ದಿನಗಳ ಹಿಂದೆ ಪಕ್ಕದಮನೆಯ ಮಹಿಳೆಯೊಬ್ಬರು ಕೂಡ ಜ್ವರದ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಈ ಪ್ರಕರಣಗಳು ಆತಂಕ ಹೆಚ್ಚಿಸಿವೆ.

ಮೃತ ಮಹಿಳೆಯ ಪುತ್ರ ದುಬೈನಿಂದ ಬಂದಿದ್ದ :

ಮೃತ ಮಹಿಳೆಯ ಪುತ್ರ ಮಾ.16ರಂದು ದುಬೈನಿಂದ ಆಗಮಿಸಿದ್ದ ಎನ್ನಲಾಗಿದೆ. ಸದ್ಯ ಮೃತ ಮಹಿಳೆಯ ಪತಿ ಹಾಗೂ ಮಕ್ಕಳನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಸಂಪೂರ್ಣ ಸೀಲ್ ಡೌನ್ :

ಬಂಟ್ವಾಳದಲ್ಲಿ ಕೊರೋನಾ ಪಾಸಿಟಿವ್ ಬಂದಿರುವುದರಿಂದ ಬಂಟ್ವಾಳ ಕೆಳಗಿನ ಪೇಟೆಯಿಂದ ಜಕ್ರಿಬೆಟ್ಟುವಿನವರೆಗೆ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದ್ದು, ಪೊಲೀಸರು ಯಾರು ಕೂಡ ಮನೆಯಿಂದ ಹೊರಬರಬೇಡಿ ಎಂದು ಅನೌನ್ಸ್ ಮಾಡಲಾರಂಭಿಸಿದ್ದಾರೆ. ಕೊರೋನಾ ಪಾಸಿಟಿವ್ ಕಂಡುಬಂದ ಬಂಟ್ವಾಳದ ಕಸ್ಬಾ ಗ್ರಾಮ ಕೂಡ ಸಂಪೂರ್ಣ ಲಾಕ್‌ಡೌನ್ ಗೆ ಒಳಪಟ್ಟಿದೆ.

Comments are closed.