ರಾಷ್ಟ್ರೀಯ

ಕೋವಿಡ್-19 ಸೋಂಕಿನಿಂದ ಮೃತಪಟ್ಟ ವೈದ್ಯರ ಅಂತ್ಯಕ್ರಿಯೆ ವಿರೋಧಿಸಿದ 20 ಮಂದಿಯ ಬಂಧನ!

Pinterest LinkedIn Tumblr


ಚೆನ್ನೈ: ಕೋವಿಡ್-19 ಸೋಂಕಿನಿಂದ ಮೃತಪಟ್ಟ ವೈದ್ಯರ ಅಂತ್ಯಕ್ರಿಯೆಗೆ ವಿರೋಧಿಸಿದ 20 ಮಂದಿಯನ್ನು ತಮಿಳುನಾಡಿನ ಪೊಲೀಸರು ಬಂಧಿಸಿದ್ದಾರೆ.

ಚೆನ್ನೈ ನಲ್ಲಿ ಈ ಘಟನೆ ನಡೆದಿದೆ. 55 ವರ್ಷದ ವೈದ್ಯರು ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದರು. ಅಂತ್ಯಕ್ರಿಯೆ ನಡೆಸುವುದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೇ ಆರೋಗ್ಯ ಅಧಿಕಾರಿಗಳಿದ್ದ ಆಂಬುಲೆನ್ಸ್ ಮೇಲೆ ದಾಳಿಯನ್ನೂ ನಡೆಸಿದರು.

ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ ಪ್ರತಿಭಟನಾ ನಿರತ 20 ಜನರನ್ನು ಬಂಧಿಸಿದ ನಂತರ ಅಂತ್ಯಕ್ರಿಯೆ ನಡೆದಿದೆ. ನಗರದಲ್ಲಿ ಈ ರೀತಿ ನಡೆದಿರುವ 2 ನೇ ಘಟನೆ ಇದಾಗಿದೆ.

ಕೆಲವು ದಿನಗಳ ಹಿಂದೆ ನೆಲ್ಲೂರಿನ ಖಾಸಗಿ ಆಸ್ಪತ್ರೆಯಲ್ಲಿ ವ್ಯಕ್ತಿಯೋರ್ವ ಕೋವಿಡ್-19 ರಿಂದ ಮೃತಪಟ್ಟಿದ್ದರು. ಅಂತ್ಯಕ್ರಿಯೆ ನಡೆಸಲು ಸ್ಥಳೀಯರು ವಿರೋಧಿಸಿದ್ದರು. ಈಗ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರೇ ಮೃತಪಟ್ಟಿದ್ದು ಅವರ ಅಂತ್ಯಕ್ರಿಯೆಗೆ ವಿರೋಧ ವ್ಯಕ್ತವಾಗಿರುವುದು ವೈದ್ಯಕೀಯ ಸಮುದಾಯಕ್ಕೆ ಆಘಾತ ಉಂಟುಮಾಡಿದೆ.

Comments are closed.