ಕರ್ನಾಟಕ

ಬಿಹಾರ ಕಾರ್ಮಿಕನಿಂದ ಮತ್ತೆ ನಾಲ್ವರಿಗೆ ಕೊರೋನಾ

Pinterest LinkedIn Tumblr


ಬೆಂಗಳೂರು: ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿರುವಂತೆಯೇ ಇತ್ತ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಂಗಸಂದ್ರದ ವೈರಸ್ ಚೈನ್ ಲಿಂಕ್ ಇಡೀ ಬೆಂಗಳೀರಿಗರನ್ನು ಬೆಚ್ಚಿ ಬೀಳಿಸಿದ್ದು. ಓರ್ವ ಕಾರ್ಮಿಕನಿಂದ ಬರೊಬ್ಬರಿ 13 ಮಂದಿಗೆ ಕೊರೋನಾ ವೈರಸ್ ಹಬ್ಬಿದೆ.

ಹೌದು.. ಹೊಂಗಸಂದ್ರದಲ್ಲಿ ಪತ್ತೆಯಾದ ಬಿಹಾರ ಮೂಲದ ವೈರಸ್ ಸೋಂಕಿತ ಕಾರ್ಮಿಕನಿಂದ ಸೃಷ್ಟಿಯಾದ ಚೈನ್ ಲಿಂಕ್ ಬೆಳೆಯುತ್ತಲೇ ಹೋಗುತ್ತಿದ್ದು, ಬಿಹಾರ ಮೂಲದ ಕಾರ್ಮಿಕನೊಬ್ಬನಿಂದಲೇ ಹೊಂಗಸಂದ್ರದಲ್ಲಿ ಒಂದೇ ದಿನ ಬರೋಬ್ಬರಿ 13 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಆ ಮೂಲಕ ನಗರದ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.

ಬಿಹಾರ ಮೂಲದ ಕಾರ್ಮಿಕ ಬೊಮ್ಮನಹಳ್ಳಿ ವ್ಯಾಪ್ತಿಯ ಹೊಂಗಸಂದ್ರದಲ್ಲಿ ವಾಸಿಸುತ್ತಿದ್ದ. ಈತ ನಮ್ಮ ಮೆಟ್ರೋ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದ. ಈತನಿಂದ ಇದುವರೆಗೆ 13 ಮಂದಿಗೆ ಕೊರೊನಾ ಹಬ್ಬಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಇಡೀ ಪ್ರದೇಶವನ್ನು ಸೀಲ್‍ಡೌನ್ ಮಾಡಲಾಗಿದ್ದು, ಈತ ವಾಸಿಸುತ್ತಿದ್ದ ವಿದ್ಯಾಜ್ಯೋತಿ ನಗರದಲ್ಲಿ ರಸ್ತೆ, ಅಂಗಡಿ, ಮನೆಗಳನ್ನು ಬಂದ್ ಮಾಡಲಾಗಿದೆ.

ಮೂಲಗಳ ಪ್ರಕಾರ ಬಿಹಾರ ಮೂಲದ ಈ ಸೋಂಕಿತ ಕಾರ್ಮಿಕ ಹೊಂಗಸಂದ್ರದಲ್ಲಿ ಉಳಿದ 13 ಮಂದಿಯ ಒಟ್ಟಿಗೆ ವಾಸವಾಗಿದ್ದ. ಅಲ್ಲದೇ ಬಿಬಿಎಂಪಿ ನೀಡಿದ್ದ ಆಹಾರದ ಕಿಟ್‍ನಿಂದ 150 ಮಂದಿ ಒಟ್ಟಿಗೆ ಅಡುಗೆ ಮಾಡುತ್ತಿದ್ದರು. ಈತನ ಸಂಪರ್ಕದಲ್ಲಿದ್ದ 150 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಆದರೆ ಈ ಕಾರ್ಮಿಕನಿಗೆ ಕೊರೊನಾ ಹೇಗೆ ಬಂತು ಎನ್ನುವುದು ರಹಸ್ಯವಾಗಿಬಿಟ್ಟಿದೆ. ಲಾಕ್‍ಡೌನ್‍ಗೂ ಮೊದಲು ಈತ ಬಿಹಾರಕ್ಕೆ ಹೋಗಿಬಂದಿದ್ದ ಎಂದು ತಿಳಿದುಬಂದಿದೆ. ಈತನಿಂದ ಸೋಂಕಿತರಾದವರು ಪಕ್ಕದ ಮಂಗಮ್ಮನ ಪಾಳ್ಯದಲ್ಲೂ ಕೆಲಸ ಮಾಡುತ್ತಿದ್ದರು. ಹೀಗಾಗಿ ಈ ಸೋಂಕಿತರ ಸಂಪರ್ಕಕ್ಕೆ ಯಾರೆಲ್ಲ ಬಂದಿದ್ದಾರೆ ಎನ್ನುವ ಬಗ್ಗೆಯೂ ಬಿಬಿಎಂಪಿ ಮಾಹಿತಿ ಸಂಗ್ರಹಿಸುವ ಕಾರ್ಯದಲ್ಲಿ ನಿರತವಾಗಿದೆ. ಈತ ಸಂಚರಿಸಿದ್ದ ಆಟೋ ಚಾಲಕ ಮತ್ತು ಆತನ ಮನೆಯವರನ್ನು ಪತ್ತೆ ಹಚ್ಚಿ ಪರೀಕ್ಷೆ ಮಾಡಲಾಗಿದೆ. ಆದರೆ ಕೊರೊನಾ ನೆಗೆಟಿವ್ ಬಂದಿದೆ.

ಬೆಂಗಳೂರಿನಲ್ಲಿ 109ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 109ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಗುರುವಾರ ಒಂದೇ ದಿನ 18 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 13 ಮಂದಿ ಸೋಂಕಿತರು ಹೊಂಗಸಂದ್ರದವರಾಗಿದ್ದಾರೆ. ಇದರಿಂದಾಗಿ ನಗರದಲ್ಲಿ ಸೋಂಕಿತರ ಸಂಖ್ಯೆ ನೂರರ (109) ಗಡಿ ದಾಟಿದೆ. ಇದಲ್ಲದೆ ಟಿಪ್ಪುನಗರದಲ್ಲಿ ಒಂದು ಪ್ರಕರಣ ದಾಖಲಾಗಿವೆ.

ಪಾದರಾಯನಪುರದಲ್ಲಿ ಮತ್ತೆ ಮೂರು ಪ್ರಕರಣ
ಮಾ.8ರಂದು ನಗರದಲ್ಲಿ ಮೊದಲ ಕೋವಿಡ್‌ ಪ್ರಕರಣ ವರದಿಯಾಗಿತ್ತು. ಅದಾದ ಬಳಿಕ ಪ್ರಕರಣಗಳ ಸಂಖ್ಯೆ ಏರಿಕೆಯತ್ತ ಮುಖ ಮಾಡಿತ್ತು. ಆದರೆ, ನಾಲ್ಕು ದಿನಗಳಿಂದ ಎರಡು ಪ್ರಕರಣಗಳು ಮಾತ್ರ ವರದಿಯಾಗಿದ್ದವು. ಆದರೆ, ಗುರುವಾರ ಒಂದೇ ದಿನ ಹತ್ತಕ್ಕೂ ಅಧಿಕ ಪ್ರಕರಣಗಳು ವರದಿಯಾಗಿರುವುದು ಅಧಿಕಾರಿಗಳು ನಿದ್ದೆಗೆಡುವಂತೆ ಮಾಡಿದೆ. ಸೀಲ್‌ ಡೌನ್‌ಗೆ ಒಳಗಾಗಿರುವ ಪಾದರಾಯನಪುರದಲ್ಲಿ ಹೊಸದಾಗಿ ಮೂರು ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ಆ ಪ್ರದೇಶದಲ್ಲಿ ಒಟ್ಟು 22 ಕೋವಿಡ್‌ ಪ್ರಕರಣಗಳು ಬೆಳಕಿಗೆ ಬಂದಂತೆ ಆಗಿದೆ. ಈವರೆಗೆ 49 ಮಂದಿ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಮನೆಗೆ ತೆರಳಿದ್ದಾರೆ.

Comments are closed.