ಬೆಂಗಳೂರು: ಹಸಿರು ವಲಯದಲ್ಲಿ ಮದ್ಯದಂಗಡಿಗಳನ್ನು ತೆರೆಯಿರಿ ಎಂದು ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಲಾಕ್ಡೌನ್ನಿಂದಾಗಿ ರಾಜ್ಯದಲ್ಲಿ ಅರ್ಥಿಕ ಸಮಸ್ಯೆ ಎದುರಾಗಿದೆ. ಅಬಕಾರಿ ಸುಂಕ ಬಂದರೆ ರಾಜ್ಯದ ಆರ್ಥಿಕತೆ ಸ್ವಲ್ಪ ಮಟ್ಡಿಗಾದರೂ ಸುಧಾರಿಸುತ್ತದೆ. ಹೀಗಾಗಿ ಈಗಾಗಲೇ ಗುರುತಿಸಲಾಗಿರುವ ಹಸಿರು ವಲಯದ ಜಿಲ್ಲೆಗಳಲ್ಲಿ ಎಣ್ಣೆ ಅಂಗಡಿಗಳನ್ನು ಆರಂಭ ಮಾಡಿದರೆ ಒಳಿತು. ಕೆಲ ಷರತ್ತುಗಳನ್ನು ಹಾಕಿ, ಮದ್ಯದಂಗಡಿ ತೆರೆದರೆ ರಾಜ್ಯದ ಆರ್ಥಿಕ ದೃಷ್ಟಿಯಿಂದ ಒಳ್ಳೆಯದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ರಾಯಚೂರು, ಶಿವಮೊಗ್ಗ, ಯಾದಗಿರಿ, ಹಾಸನ, ಕೊಪ್ಪಳ, ಹಾವೇರಿ, ಕೋಲಾರ, ರಾಮನಗರ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ ಸೇರಿ 13 ಜಿಲ್ಲೆಗಳನ್ನು ಹಸಿರು ವಲಯ ಎಂದು ಗುರುತಿಸಲಾಗಿದ್ದು, ಇಲ್ಲಿ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ. ಆದರೆ, ಮದ್ಯದಂಗಡಿ ಮಾತ್ರ ನಿಷೇಧಿಸಲಾಗಿದೆ.
Comments are closed.