ರಾಷ್ಟ್ರೀಯ

ಲಾಕ್ ಡೌನ್ ನಲ್ಲಿ ಸಿಲುಕಿದ್ದ 2.5 ಲಕ್ಷ ಜನರನ್ನು ಅವರ ಊರುಗಳಿಗೆ ತಲುಪಿಸಿದ ರೈಲ್ವೆ

Pinterest LinkedIn Tumblr


ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ವಿವಿಧ ಸ್ಥಳಗಳಲ್ಲಿ ಸಿಲುಕಿದ್ದ ಸುಮಾರು 2.5 ಲಕ್ಷ ವಲಸೆ ಕಾರ್ಮಿಕರನ್ನು 222 ವಿಶೇಷ ರೈಲುಗಳ ಮೂಲಕ ಅವರ ಊರುಗಳಿಗೆ ತಲುಪಿಸಲಾಗಿದೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಪುಣ್ಯ ಸಲಿಲ ಶ್ರಿವಾತ್ಸವ್ ಅವರು, ಲಾಕ್ ಡೌನ್ ಮಾರ್ಗಸೂಚಿಗಳ ಪ್ರಕಾರವೇ ಜನರಿಗೆ ಕೆಲವು ವಿನಾಯಿತಿಗಳನ್ನು ನೀಡಲಾಗಿದೆ ಎಂದರು.

ಇದೇ ವೇಳೆ ಔರಂಗಬಾದ್ ನಲ್ಲಿ ಗೂಡ್ಸ್ ರೈಲಿಗೆ ಸಿಲುಕಿ 16 ವಲಸೆ ಕಾರ್ಮಿಕರು ಮೃತಪಟ್ಟ ಬಗ್ಗೆ ಪ್ರತಿಕ್ರಿಯಿಸಿದ ಪುಣ್ಯ ಅವರು, ಇದೊಂದು ದುರದೃಷ್ಟಕರ ಘಟನೆ ಎಂದರು.

ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಹಂತ ಹಂತವಾಗಿ ವಾಣಿಜ್ಯ ವಿಮಾನ ಮತ್ತು ಹಡಗುಗಳ ಮೂಲಕ ಕರೆತರಲಾಗುವುದು. ಈ ಸಂಬಂಧ ಅಂತರ್ ಸಚಿವಾಲಯ ಸಹಕಾರ ಸಮಿತಿ ರಚಿಸಲಾಗಿದೆ ಎಂದರು.

Comments are closed.