
ಮುಂಬೈ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ಅಮೆರಿಕಾದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 225 ಭಾರತೀಯರು ಸೋಮವಾರ ಮುಂಬೈನ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ಅಮೆರಿಕಾದ ಸನ್ ಫ್ರಾನ್ಸಿಸ್ಕೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 225 ಭಾರತೀಯರನ್ನು ಹೊತ್ತ ಏರ್ ಇಂಡಿಯಾದ ವಿಶೇಷ ವಿಮಾನ ಇಂದು ಭಾರತಕ್ಕೆ ಬಂದಿಳಿದಿದೆ.
ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಸಹಕಾರ ಹಾಗೂ ಬೆಂಬಲ ನೀಡಿದ ಮಹಾರಾಷ್ಟ್ರ ಸರ್ಕಾರ ಹಾಗೂ ಏರ್ ಇಂಡಿಯಾ ವಿಮಾನ ಸಂಸ್ಥೆಗೆ ಧನ್ಯವಾದಗಳು. ಸಿಜಿ ಸಂಜಯ್ ಪಾಂಡಾ ಹಾಗೂ ಅವರ ತಂಡ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಹೇಳಿದ್ದಾರೆ.
ಕೊರೋನಾ ವ್ಯಾಪಕವಾಗುತ್ತಿದ್ದಂತೆಯೇ ಭಾರತದ ದೇಶದಾದ್ಯಂತ ಲಾಕ್’ಡೌನ್ ಘೋಷಣೆ ಮಾಡಿತ್ತು. ಲಾಕ್’ಡೌನ್ ಘೋಷಣೆ ಮಾಡಿದ 50 ದಿನಗಳ ಬಳಿಕ ಇದೇ ಮೊದಲ ಬಾರಿಗೆ ಸನ್ ಫ್ರಾನ್ಸಿಸ್ಕೋದಲ್ಲಿ ಏರ್ ಇಂಡಿಯಾ ಕಾರ್ಯನಿರ್ವಹಿಸುತ್ತಿದೆ.
Comments are closed.