ಕರಾವಳಿ

ಬಿಜೈ ಪ್ರಾಥಮಿಕ ಆರೋಗ್ಯ ಕೇಂದ್ರದ ವಿರುದ್ಧ ದೂರು : ಶಾಸಕ ಕಾಮತ್‌ರಿಂದ ಪರಿಶೀಲನೆ

Pinterest LinkedIn Tumblr

ಮಂಗಳೂರು: ಬಿಜೈ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆಯ ಕುರಿತು ಸಾರ್ವಜನಿಕರ ದೂರಿನ ಮೇರೆಗೆ ಶಾಸಕ ವೇದವ್ಯಾಸ್ ಕಾಮತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಕುರಿತು ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ನಗರದ ಬಿಜೈ ಪ್ರಾಥಮಿಕ ಆರೋಗ್ಯ ಕೇಂದ್ರದ ಕುರಿತು ಸಾರ್ವಜನಿಕರು ಹಾಗೂ ಮಾಧ್ಯಮಗಳಲ್ಲಿ ದೂರು ಬಂದ ಕಾರಣ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಇಲ್ಲಿಗೆ ಭೇಚಿ ನೀಡುವ ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಬಿಜೈ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೇಂದ್ರದ ಮುಂಭಾಗದಲ್ಲಿ ಪರ್ಯಾಯ ವ್ಯವಸ್ಥೆಯ ಕುರಿತು ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಈ ಸಂಧರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡ ಪ್ರಶಾಂತ್ ಆಳ್ವ, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Comments are closed.