ಉಡುಪಿ: ಕೊರೊನಾ ವೈರಸ್ (ಕೋವಿಡ್-19) ಪ್ರಕರಣದ ಸಂಖ್ಯೆ ಉಡುಪಿ ಜಿಲ್ಲೆಯಲ್ಲಿ ಮತ್ತೆ ಏರಿಕೆ ಕಂಡಿದ್ದುಗುರುವಾರ 27 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಸದ್ಯ ಜಿಲ್ಲೆಯ ಪಾಸಿಟಿವ್ ಪ್ರಕರಣದ ಸಂಖ್ಯೆ 147 ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಿಂದ ಬಂದ 24 ಮಂದಿಯಲ್ಲಿ ಮತ್ತು ತೆಲಂಗಾಣದದಿಂದ ಬಂದ ಇಬ್ಬರು ಹಾಗೂ ಕೇರಳದಿಂದ ಬಂದ ಒಬ್ಬರಲ್ಲಿ ಕೊರೋನಾ ಸೋಂಕು ದೃಢವಾಗಿದೆ. ಇವರ ಪೈಕಿ 18 ಮಂದಿ ಪುರುಷರು ಹಾಗೂ 9 ಮಂದಿ ಮಹಿಳೆಯರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಎಲ್ಲರನ್ನು ಉಡುಪಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Comments are closed.