ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮರವಂತೆ ಬೀಚ್ ಬಳಿ ಬೈಕಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಗುರುವಾರ ತಡರಾತ್ರಿ ನಡೆದಿದ್ದು ಈ ಅವಘಡದಲ್ಲಿ ಓರ್ವ ಮೃತಪಟ್ಟು ಇನ್ನೋರ್ವನಿಗೆ ಗಂಭೀರ ಗಾಯಗಳಾಗಿದೆ.
ಸುರೇಶ್ (45) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು ಈರಪ್ಪ (48) ಗಾಯಾಳುವಾಗಿದ್ದಾರೆ.
ಬೈಕಿನಲ್ಲಿ ಹಾವೇರಿ ಮೂಲದ ವೀರಪ್ಪ ಹಾಗೂ ಸುರೇಶ್ ಪ್ರಯಾಣಿಸುತ್ತಿದ್ದರು. ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಹೆದ್ದಾರಿಯಲ್ಲಿ ಬಿದ್ದಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಗಂಗೊಳ್ಳಿ ಜೀವರಕ್ಷಕ ಹಾಗೂ ಆಪತ್ಬಾಂಧವ ಆಂಬ್ಯುಲೆನ್ಸ್ ಹಾಗೂ ಗಂಗೊಳ್ಳಿ ಪೊಲೀಸರು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದರು.
ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Comments are closed.