ಕರಾವಳಿ

ಕೊರೋನ ವೈರಸ್ ತಡೆಗಟ್ಟುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಶ್ಲಾಘನೀಯ : ರವಿರಾಜ್ ಹೆಗ್ಡೆ

Pinterest LinkedIn Tumblr

ಮಂಗಳೂರು ಮಾರ್ಚ್ 18 : ಮೂರು ತಿಂಗಳಿದ ಸತತವಾಗಿ ದ.ಕ. ಜಿಲ್ಲೆಯಲ್ಲಿ ಕೋವಿಡ್ – 19 ವೈರಸ್ ವಿರುದ್ಧ ವ್ಯಾಪಕ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ನಂದಿನಿ ಉತ್ಪನ್ನಗಳ ಕಿಟ್‍ಗಳನ್ನು ವಿತರಿಸಲಾಯಿತು.

ಸೋಮವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಕಿಟ್ ವಿತರಣೆ ಮಾಡಲಾಯಿತು. ಜಿಲ್ಲೆಯ 1,378 ಆಶಾ ಕಾರ್ಯಕರ್ತೆಯರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಿಟ್ ವಿತರಣೆ ಮಾಡಿದರು.

ಜಿಲ್ಲೆಯಲ್ಲಿ ಕೊರೋನ್ ವೈರಸ್ ರೋಗವು ದಿನದಿಂದ ದಿನಕ್ಕೆ ವ್ಯಾಪಾಕವಾಗಿ ಹರಡುತ್ತಿದೆ. ಕೊರೋನಾ ವಾರಿಯರ್‍ಗಳಾದ ಆಶಾ ಕಾರ್ಯಕರ್ತೆರು ಪ್ರತಿ ಮನೆ ಮನೆಗಳಿಗೆ ಭೇಟಿ ನೀಡಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮತ್ತು ಹೋಂ ಕ್ವಾರೆಂಟೈನ್‍ನಲ್ಲಿ ಇವರುವವರ ಬಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮಾಹಿತಿ ನೀಡಿ ವೈರಸ್ ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವಿಕೆಯಲ್ಲಿ ಕಾರ್ಯಕರ್ತೆಯರು ಬಹು ಮುಖ್ಯ ಪಾತ್ರ ವಹಿಸುತ್ತಿದ್ದಾರೆ. ಆದುದರಿಂದ ಅವರ ಸೇವೆಯನ್ನು ಗುರುತಿಸಿ ಗೌರವಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಒಕ್ಕೂಟ ಅಧ್ಯಕ್ಷ ರವಿರಾಜ್ ಹೆಗ್ಡೆ ತಿಳಿಸಿದರು ,

ಕಾರ್ಯಕ್ರಮದಲ್ಲಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಹಾಲು ಒಕ್ಕೂಟದ ನಿರ್ದೇಶಕ ಡಾ. ಜಿ.ವಿ ಹೆಗಡೆ, ಸಹಕಾರಿ ಇಲಾಖೆಯ ಉಪನಿಬಂಧಕ ಪ್ರವೀಣ್ ನಾಯಕ್ ಒಕ್ಕೂಟದ ಸಿಬ್ಬಂದಿಗಳು ಇನ್ನಿತರರು ಉಪಸ್ಥಿತರಿದ್ದರು,

Comments are closed.