ಮಂಗಳೂರು, ಜೂನ್. 09 : ರಾಜ್ಯದಲ್ಲಿ ಇಂದು ಒಂದೇ ದಿನ ಮತ್ತೆ 161 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ. ಇದರಲ್ಲಿ ದ.ಕ.ಜಿಲ್ಲೆಯ 23 ಮಂದಿ ಸೇರಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ರಾಜ್ಯದಲ್ಲಿ 161 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಿದೆ. ಇದರಲ್ಲಿ ದ.ಕ. ಜಿಲ್ಲೆಯಲ್ಲಿ 23 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಾಗಿ ವರದಿಯಾಗಿದೆ.
ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 5,921ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರ ಮತ್ತು ಕಲಬುರಗಿ ಜಿಲ್ಲೆಯಲ್ಲಿ ತಲಾ ಒಂದು ಸಾವು ಸಂಭವಿಸಿದ್ದು, ಒಟ್ಟು ಸಾವಿನ ಸಂಖ್ಯೆ 66ಕ್ಕೆ ಏರಿದೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಯಾದಗಿರಿ 61, ಬೆಂಗಳೂರು ನಗರ 29, ದಕ್ಷಿಣ ಕನ್ನಡ 23, ಕಲಬುರಗಿ 10, ಬೀದರ್ 9, ದಾವಣಗೆರೆ 8, ಕೊಪ್ಪಳ 6, ಶಿವಮೊಗ್ಗ 4, ಚಿಕ್ಕಬಳ್ಳಾಪುರ, ವಿಜಯಪುರ, ಮೈಸೂರು ಮತ್ತು ಧಾತವಾಡದಲ್ಲಿ ತಲಾ 2 , ಬಾಗಲಕೋಟೆ, ಚಾಮರಾಜನಗರ ಮತ್ತು ತುಮಕೂರಿನಲ್ಲಿ ತಲಾ ಒಂದೊಂದು ಪ್ರಕರಣಗಳು ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 5,921 ಕೊರೋನ ಸೋಂಕಿತರ ಪೈಕಿ 2,605 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 164 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 66 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 3248 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದೆ.
Comments are closed.