ಮಂಗಳೂರು : ಮಂಗಳೂರು ಮಹಾನಗರ ವ್ಯಾಪ್ತಿಯ ಬಜಾಲ್ ವಾರ್ಡ್ ನಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು
ಈ ವೇಳೆ ಮಾತನಾಡಿದ ಶಾಸಕರು,ಕಳೆದ ಬಾರಿ ಬಜಾಲ್ ವಾರ್ಡಿಗೆ ಭೇಟಿ ನೀಡಿದ್ದ ಸಂದರ್ಭದ ಜಯನಗರ ಕಲ್ಲುರ್ಟಿ ದೇವಸ್ಥಾನಕ್ಕೆ ಹೋಗುವ ದಾರಿ ಅಭಿವೃದ್ಧಿಗೆ ಸ್ಥಳೀಯ ಮುಖಂಡರು ನನ್ನಲ್ಲಿ ಮನವಿ ಸಲ್ಲಿಸಿದ್ದರು. ಈ ರಸ್ತೆ ಕಳೆದ ವರ್ಷ ಸುರಿದ ಮಳೆಯಿಂದಾಗಿ ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದು ಪರಿಸರದ ಜನರ ಓಡಾಟಕ್ಕೆ ಕಷ್ಟವಾಗುತ್ತಿತ್ತು. ಹಾಗಾಗಿ ಮಳೆಹಾನಿ ಅನುದಾನದಿಂದ 10 ಲಕ್ಷ ರೂಪಾಯಿ ಬಿಡುಗಡೆ ಗೊಳಿಸಲಾಗಿದ್ದು ರಸ್ತೆ ಅಭಿವೃದ್ಧಿ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಸ್ಥಳೀಯರ ಸಮ್ಮುಖದಲ್ಲಿ ನೆರವೇರಿಸಲಾಯಿತು ಎಂದರು.
ಬಜಾಲ್ ವಾರ್ಡ್ ಕಳೆದ ಕೆಲ ವರ್ಷಗಳ ಹಿಂದಷ್ಟೇ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆಯಾಗಿರುವುದರಿಂದ ಬಹಳಷ್ಟು ಅನುದಾನಗಳನ್ನು ಈ ವಾರ್ಡಿಗೆ ನೀಡಬೇಕಾಗಿದೆ. ಇಲ್ಲಿನ ರಸ್ತೆ, ಒಳ ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ವಿಶೇಷ ಅನುದಾನ ಒದಗಿಸಿ ಅಭಿವೃದ್ಧಿಪಡಿಸುವ ಕುರಿತು ಯೋಜನೆ ರೂಪಿಸಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸ್ಥಳೀಯ ಪಾಲಿಕೆ ಸದಸ್ಯ ಅಶ್ರಫ್, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಚಂದ್ರಶೇಖರ್ ಜಯನಗರ,ಶಿವಾಜಿ ರಾವ್ ಜಲ್ಲಿಗುಡ್ಡೆ, ವೇಣುಗೋಪಾಲ ರಾವ್, ರಾಜೇಶ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ಪ್ರಸಾದ್ ಶೆಟ್ಟಿ, ಪುಷ್ಪರಾಜ್, ಚರಿತ್ ಪೂಜಾರಿ, ಬಾಲಕೃಷ್ಣ, ಗಣೇಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Comments are closed.