ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 14 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 164ಕ್ಕೇರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಐವರು, ಬಳ್ಳಾರಿಯಲ್ಲಿ 4, ಕಲಬುರಗಿ ಹಾಗೂ ರಾಮನಗರದಲ್ಲಿ ತಲಾ ಇಬ್ಬರು ಮತ್ತು ತುಮಕೂರಿನಲ್ಲಿ ಒಬ್ಬರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಇದುವರೆಗೂ ಬೆಂಗಳೂರಿನಲ್ಲಿ ಅತಿ ಹೆಚ್ಚು ಎಂಬಂತೆ 78 ಜನ ಮೃತಪಟ್ಟಿದ್ದರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ರಾಜ್ಯದಲ್ಲಿ ಹೊಸದಾಗಿ 397 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10118ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಬುಧವಾರ 149 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 6151ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 3799 ಸಕ್ರಿಯ ಪ್ರಕರಣಗಳಿದ್ದು, 112 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೊಸದಾಗಿ ಪತ್ತೆಯಾದ 397 ಸೋಂಕಿತರ ಪೈಕಿ 8 ಮಂದಿ ಅಂತರಾಷ್ಟ್ರೀಯ ಪ್ರಯಾಣ ಹಿನ್ನೆಲೆ ಹಾಗೂ 75 ಮಂದಿ ಹೊರರಾಜ್ಯ ಪ್ರಯಾಣದ ಇತಿಹಾಸ ಹೊಂದಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ 173, ಕಲಬುರಗಿಯಲ್ಲಿ 34, ರಾಮನಗರದಲ್ಲಿ ತಲಾ 22 ಸೋಂಕಿತರು, ಉಡುಪಿ 14, ಯಾದಗಿರಿ 13, ದಕ್ಷಿಣ ಕನ್ನಡ ಹಾಗೂ ಧಾರವಾಡದಲ್ಲಿ ತಲಾ 12, ಕೊಪ್ಪಳ 11, ರಾಯಚೂರು ಹಾಗೂ ಉತ್ತರ ಕನ್ನಡದಲ್ಲಿ ತಲಾ 09, ದಾವಣಗೆರೆ ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ 08, ಮೈಸೂರು, ಬೆಂಗಳೂರು ಗ್ರಾಮಾಂತರದಲ್ಲಿ ತಲಾ 07, ಗದಗ, ಕೋಲಾರದಲ್ಲಿ ತಲಾ 06, ಬೀದರ್ 05, ವಿಜಯಪುರ ಹಾಗೂ ಶಿವಮೊಗ್ಗದಲ್ಲಿ ಕ್ರಮವಾಗಿ 04, 03, ಮಂಡ್ಯ, ಚಿತ್ರದುರ್ಗ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ತಲಾ 02, ಬೆಳಗಾವಿ, ಹಾಸನ, ತುಮಕೂರು ಮತ್ತು ಚಿಕ್ಕಮಗಳೂರಿನಲ್ಲಿ ತಲಾ ಒಬ್ಬರು ಸೋಂಕಿತರು ಪತ್ತೆಯಾಗಿದ್ದಾರೆ.
ಬೆಂಗಳೂರು ನಗರ 59, 54, 70, 50, 68 ವರ್ಷದ ವ್ಯಕ್ತಿಗಳು, ಬಳ್ಳಾರಿಯ 59, 73, 43, 28 ವರ್ಷದ ವ್ಯಕ್ತಿಗಳು, ಕಲಬುರಗಿಯಲ್ಲಿ 78, 55 ವರ್ಷದ ವ್ಯಕ್ತಿಗಳು, ತುಮಕೂರಿನಲ್ಲಿ 56, ರಾಮನಗರದಲ್ಲಿ 53 ಹಾಗೂ 60 ವರ್ಷದ ವ್ಯಕ್ತಿಗಳು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Comments are closed.