ರಾಷ್ಟ್ರೀಯ

ಭಾರತ-ಚೀನಾ ಸಂಘರ್ಷ ಹಠಾತ್ ನಡೆದಿದ್ದಲ್ಲ, ಅದೊಂದು ಪೂರ್ವ ನಿಯೋಜಿತ ಕೃತ್ಯ: ಕಂದ್ರ ಸರ್ಕಾರ

Pinterest LinkedIn Tumblr

ನವದೆಹಲಿ: ಪೂರ್ವ ಲಡಾಖ್’ನ ಗಲ್ವಾನ್ ಕಣಿವೆಯಲ್ಲಿ ಭಾರತ, ಚೀನಾ ಸೈನಿಕರ ನಡುವಣ ಸಂಘರ್ಷ ಹಠಾತ್ ನಡೆದಿದ್ದಲ್ಲ. ಅದೊಂದು ಪೂರ್ವ ನಿಯೋಜಿತ ಕೃತ್ಯ ಎಂದು ಕಂದ್ರ ಸರ್ಕಾರ ಪರೋಕ್ಷವಾಗಿ ಹೇಳಿದೆ.

ಉಭಯ ದೇಶಗಳ ನಡುವಿರುವ ಎಲ್ಲಾ ಒಡಂಬಡಿಕೆ ಗಾಳಿಗೆ ತೂರಿ ನೈಜ ಗುಡಿ ರೇಖೆಗೆ ಮೇ ಆರಂಭದಿಂದಲೇ ಸೇನೆ ಹಾಗೂ ಶಸ್ತ್ರಾಸ್ತ್ರಗಳನ್ನು ಭಾರೀ ಪ್ರಮಾಣದಲ್ಲಿ ಚೀನಾ ಜಮಾವಣೆ ಮಾಡಿತ್ತು ಎಂದು ಹೇಳಿದೆ. ಇದೇ ವೇಳೆ ಗಲ್ವಾನ್ ಘರ್ಷಣೆಗೆ ಸಂಬಂಧಿಸಿದ ಘಟನಾವಳಿಗಳನ್ನು ಇದೇ ಮೊದಲ ಬಾರಿಗೆ ಹಂಚಿಕೊಂಡಿದೆ.

ಗಲ್ವಾನ್ ಕಣಿವೆಯಲ್ಲಿ ಭಾರತೀಯರ ಸಾಮಾನ್ಯ ಹಾಗೂ ಸಾಂಪ್ರದಾಯಿಕ ಗಸ್ತಿಗೆ ಚೀನಾ ಮೇ ಆರಂಭದಿಂದಲೇ ಅಡ್ಡಿಪಡಿಸಿತ್ತು. ಮೇ ಮಧ್ಯಭಾಗದ ವೇಳೆಗೆ ಗಡಿಯಲ್ಲಿನ ಯಥಾಸ್ಥಿತಿಯನ್ನೇ ಬದಲಿಸಿತು ಹೊರಟಿತು. ಚೀನಾದ ಈ ವರ್ತನೆ ವಿರುದ್ಧ ರಾಜತಾಂತ್ರಿಕ ಹಾಗೂ ಮಿಲಿಟರಿ ಮಾರ್ಗಗಳ ಮೂಲಕ ನಾವು ಪ್ರತಿಭಟನೆ ದಾಖಲಿಸಿದೆವು. ಇಂತಹ ಬದಲಾವಣೆಯನ್ನು ನಾವು ಒಪ್ಪುವುದಿಲ್ಲ ಎಂದೂ ತಿಳಿಸಿದ್ದೆವು. ಆದರೆ, ಈ ನಿರ್ಧಾರವನ್ನು ಉಲ್ಲಂಘಿಸಿ ಚೀನಾ ಯೋಧರು ಗಲ್ವಾನ್ ನಲ್ಲಿ ಟೆಂಟ್ ಗಳನ್ನು ನಿರ್ಮಿಸಿದರು.

ಇದನ್ನು ತಡೆದಾಗ ಜೂ.15ರಂದು ಚೀನಾ ಪಡೆಗಳು ಹಿಂಸಾಚಾರ ನಡೆಸಿ, ನಮ್ಮ ಯೋಧರ ಸಾವಿಗೆ ಕಾರಣವಾದವು ಎಂದು ವಿದೇಶಾಂಗ ಇಲಾಖೆ ವಕ್ತಾರ ಅನುರಾಗ ಶ್ರೀವಾಸ್ತವ ಅವರು ತಿಳಿಸಿದ್ದಾರೆ.

Comments are closed.