ಕರಾವಳಿ

ಗೋ ಮಾಂಸ ಅಕ್ರಮ ಮಾರಾಟ: ಬೈಂದೂರಿನಲ್ಲಿ ಇಬ್ಬರ ಬಂಧನ

Pinterest LinkedIn Tumblr

ಕುಂದಾಪುರ: ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಘಟನೆ ಬೈಂದೂರು ತಾಲೂಕಿನಲ್ಲಿ ವರದಿಯಾಗಿದೆ.

ತಾಲೂಕಿನ ತೊಂಡೆಮಕ್ಕಿ ವಿದ್ಯಾನಗರ ಬಳಿ ಅಕ್ರಮ ದನದ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಯಾಸಿನ್, ಫಹಾದ್ ಮತ್ತು ಇತರ ಗೋ ಕಳ್ಳರ ಗುಂಪು ಶಿರೂರು ಪರಿಸರದಲ್ಲಿ ದನಗಳನ್ನು ಕಳವುಗೈದು ಮಾಂಸ ಮಾಡಿ ಮಾರಾಟ ಮಾಡುವ ದಂಧೆ ನಡೆಸುತ್ತಿದ್ದರು. ಸ್ಥಳೀಯರ ಮಾಹಿತಿ ಆಧರಿಸಿ ಪೊಲೀಸರು ತೊಂಡೆಮಕ್ಕಿ ವಿದ್ಯಾನಗರ ಬಳಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳಿಂದ ಒಂದು ಬೈಕು ಹಾಗೂ ಹತ್ತು ಕೆಜಿ ದನದ ಮಾಂಸವನ್ನು ವಶಪಡಿಸಿಕೊಂಡಿದ್ದು ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.