ಕುಂದಾಪುರ: ನಗರದ ಸಂಚಾರಿ ಠಾಣೆ ಹೆಡ್‌ಕಾನ್ಸ್‌ಟೆಬಲ್ ಒಬ್ಬರಿಗೆ ಕೊರೋನಾ ಪಾಸಿಟಿವ್ ದ್ರಢವಾಗಿದ್ದು ಅವರನ್ನು ಕುಂದಾಪುರ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
59 ವರ್ಷ ಪ್ರಾಯದ ಹೆಡ್‌ಕಾನ್ಸ್‌ಟೆಬಲ್ ಒಬ್ಬರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ಅವರಿಗೆ ಕೋವಿಡ್-19 ತಪಾಸಣೆ ನಡೆಸಲಾಗಿತ್ತು. ಅದರ ವರದಿ ಬಂದಿದ್ದು ಹೆಡ್‌ಕಾನ್ಸ್‌ಟೆಬಲ್ ಅವರಿಗೆ ಕೊರೋನಾ ಇರುವುದು ತಿಳಿದಿದೆ. ಸದ್ಯ ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಗುತ್ತಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆಂಬ ಮಾಹಿತಿಯಿದೆ.
ಇನ್ನು ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯನ್ನು ಎರಡು ದಿನಗಳ ಕಾಲ ಮುಚ್ಚಿ ಸ್ಯಾನಿಟೈಸಿಂಗ್ ಮಾಡಲಾಗುತ್ತದೆ. ಎರಡು ದಿನಗಳ ಕಾಲ ಸಮೀಪದ ಪ್ರವಾಸಿ ಮಂದಿರ (ಐಬಿ) ಯಲ್ಲಿ ಸಂಚಾರಿ ಠಾಣೆ ಕಾರ್ಯನಿರ್ವಹಿಸಲಿದೆ. ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಸ್ಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಹದಿನೈದು ದಿನಗಳ ಕಾಲ ಹೋಂ ಕ್ವಾರೆಂಟೈನ್ ಕಳಿಸಲಾಗುತ್ತದೆ. ಹೆಡ್‌ಕಾನ್ಸ್‌ಟೆಬಲ್ ಇದ್ದ ಪೊಲೀಸ್ ಕ್ವಾಟ್ರಸ್ ಕೂಡ ಸೀಲ್ ಡೌನ್ ಮಾಡಲಾಗಿದೆ ಎಂದು ‘ಕನ್ನಡಿಗ ವರ್ಲ್ಡ್’ಗೆ ಕುಂದಾಪುರ ಉಪವಿಭಾಗದ ಎಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
(ವರದಿ- ಯೋಗೀಶ್ ಕುಂಭಾಸಿ)
Comments are closed.