ಮಂಗಳೂರು, ಜುಲೈ.07: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಮಹಾಮಾರಿ ಕೊರೊನಾ ವೈರಸ್ಗೆ ಮತ್ತೊಂದು ಬಲಿಯಾಗಿದೆ. ಮೂಡಬಿದಿರೆಯ ವ್ಯಕ್ತಿಯೊಬ್ಬರು ಮಂಗಳವಾರ ಬೆಳಗ್ಗೆ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಮೂಡಬಿದ್ರೆಯ 53 ವರ್ಷ ಪ್ರಾಯದ ವ್ಯಕ್ತಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಇವರು ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 26ಕ್ಕೆ ಏರಿಕೆಯಾಗಿದೆ.
Comments are closed.