ಬೆಂಗಳೂರು (ಜು.8): ಕೊರೋನಾ ವೈರಸ್ ರಾಜ್ಯದಲ್ಲಿ ಮಿತಿ ಮೀರಿ ಹರಡುತ್ತಿದೆ. ಅನೇಕ ಕಡೆಗಳಲ್ಲಿ ಸ್ವಯಂ ಪ್ರೇರಿತ ಬಂದ್ಗೆ ಕರೆ ನೀಡಲಾಗಿದೆ. ಇನ್ನು, ಒಂದು ದಿನವಾದರೂ ಜನರ ಓಡಾಟ ತಡೆಯುವ ಉದ್ದೇಶದಿಂದ ರಾಜ್ಯಸರ್ಕಾರ ಭಾನುವಾರ ಲಾಕ್ಡೌನ್ ನಿಯಮ ಜಾರಿಗೆ ತಂದಿದೆ. ಇದು ಯಶಸ್ಸು ಕಂಡ ಬೆನ್ನಲ್ಲೇ ಈಗ ಶನಿವಾರ ಕೂಡ ಲಾಕ್ಡೌನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಕೊರೋನಾ ಹೆಚ್ಚುತ್ತಿದ್ದಂತೆ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ನಿಯಮ ಜಾರಿಗೆ ತರಲಾಗಿದೆ. ಅಲ್ಲದೆ, ಭಾನುವಾರ ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿರುತ್ತದೆ. ಕಳೆದ ಭಾನುವಾರದ ಲಾಕ್ಡೌನ್ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹೀಗಾಗಿ, ಶನಿವಾರವೂ ಲಾಕ್ಡೌನ್ ಘೋಷಣೆ ಮಾಡಿದರೆ ಹೇಗೆ ಎನ್ನುವ ಪ್ರಶ್ನೆಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರ ತಮ್ಮ ಸರ್ಕಾರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಚಿವರ ಮುಂದಿಟ್ಟಿದ್ದಾರೆ.
ಸಭೆಯಲ್ಲಿ ಡಾ.ಸಿ.ಎನ್.ಅಶ್ವತ್ನಾರಾಯಣ್, ಡಾ.ಕೆ.ಸುಧಾಕರ್ ಜತೆ ಲಾಕ್ಡೌನ್ ಜಾರಿ ಬಗ್ಗೆ ಸಿಎಂ ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ. “ಸದ್ಯ ಭಾನುವಾರ ಮಾತ್ರ ಸಂಪೂರ್ಣ ಲಾಕ್ಡೌನ್ ಆದೇಶ ಜಾರಿ ಮಾಡಿದ್ದೇವೆ. ರಾತ್ರಿ 8 ಘಂಟೆಯಿಂದ ಬೆಳಿಗ್ಗೆ 5 ಘಂಟೆಯವರೆಗೂ ಕರ್ಫ್ಯೂ ಜಾರಿಗೊಳಿಸಿದ್ದೇವೆ. ಇದಿಷ್ಟೇ ಸಾಕಾಗುವುದಿಲ್ಲ ಎನಿಸುತ್ತಿದೆ. ಹೀಗಾಗಿ, ಮುಂದಿನ ಮೂರು ವಾರಗಳ ಕಾಲ ಶನಿವಾರವು ಲಾಕ್ಡೌನ್ ವಿಸ್ತರಣೆ ಮಾಡಿದರೆ ಹೇಗೆ? ಎಂದು ಸಚಿವರನ್ನು ಸಿಎಂ ಪ್ರಶ್ನಿಸಿದ್ದಾರೆ.
ಈ ಕುರಿಂತೆ ಸಂಜೆ ಒಳಗೆ ಅನಿಸಿಕೆ ತಿಳಿಸುವಂತೆ ಅಶ್ವತ್ನಾರಾಯಣ್, ಹಾಗೂ ಸುಧಾಕರ್ ಬಳಿ ಕೊರಿದ್ದಾರೆ. ಸಚಿವರ ಅಭಿಪ್ರಾಯದ ಮೇಲೆ ಶನಿವಾರದ ಲಾಕ್ಡೌನ್ ಭವಿಷ್ಯ ನಿರ್ಧಾರವಾಗಲಿದೆ ಎನ್ನಲಾಗಿದೆ.
Comments are closed.