ಬೆಂಗಳೂರು: ಒಂದೇ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 85 ಕಾರ್ಮಿಕರಿಗೆ ಒಂದೇ ದಿನ ಕೊರೋನಾ ಸೋಂಕು ದೃಢಪಟ್ಟಿದ್ದು, ಇಡೀ ಕಾರ್ಖಾನೆಯೇ ಬೆಚ್ಚಿ ಬೀಳುವಂತಾಗಿದೆ.
ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಣ್ಣೂರಿನ ಎಲ್ ಅಂಡ್ ಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 85 ಕಾರ್ಮಿಕರಿಗೆ ವೈದ್ಯಕೀಯ ಪರೀಕ್ಷೆಯಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ.
ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸದ್ಯ ಎಲ್ ಅಂಡ್ ಟಿ ಕಂಪನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಇತ್ತೀಚೆಗೆ ಕಂಪನಿಯ ಎಲ್ಲಾ ಕಾರ್ಮಿಕರನ್ನು ಸಾಮೂಹಿಕವಾಗಿ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಶುಕ್ರವಾರ ಹೊರಬಂದ ವೈದ್ಯಕೀಯ ವರದಿಯಲ್ಲಿ 85 ಕಾರ್ಮಿಕರಿಗೆ ಸೋಂಕಿ ಇರುವುದು ಖಾತರಿ ಆಗಿದೆ.
ಈ ಕುರಿತು ಬಾಗಲೂರು ಪೊಲೀಸ್ ಠಾಣೆಯಲ್ಲಿ ನಿನ್ನೆ ಕಂಪೆನಿ ಮುಖ್ಯಸ್ಥರನ್ನು ಕರೆಸಿಕೊಂಡು ಉನ್ನತ ಪೊಲೀಸ್ ಅಧಿಕಾರಿಗಳು ಚರ್ಚೆ ನಡೆಸಿದರು. ತಕ್ಷಣವೇ ಕಂಪೆನಿಯನ್ನು ಸೀಲ್ ಮಾಡುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದರು.
ಸದ್ಯ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
Comments are closed.