ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕಾ ರಾಷ್ಟ್ರವನ್ನು ಮಹಾಮಾರಿ ಕೊರೋನಾ ವೈರಸ್ ಬೆನ್ನು ಬಿಡದಂತೆ ಕಾಡುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 66,528 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಇನ್ನು ಒಂದೇ ದಿನ ಮಹಾಮಾರಿ ವೈರಸ್ 774 ಮಂದಿಯನ್ನು ಬಲಿ ಪಡೆದುಕೊಂಡಿದ್ದು, ಇದರೊಂದಿಗೆ ಸಾವಿನ ಸಂಖ್ಯೆ ಕೂಡ 133,969ಕ್ಕೆ ತಲುಪಿದೆ.
ಒಂದೇ ದಿನ 66,528 ಮಂದಿ ಸೋಂಕು ಪತ್ತೆಯಾಗುವುದರೊಂದಿಗೆ ರಾಷ್ಟ್ರದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 3.18 ಮಿಲಿಯನ್’ಗೆ ತಲುಪಿದೆ ಎಂದು ವರದಿಗಳು ತಿಳಿಸಿವೆ.
Comments are closed.