ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಐವರು ಕೊರೋನಕ್ಕೆ ಬಲಿ

Pinterest LinkedIn Tumblr

ಮಂಗಳೂರು, ಜುಲೈ.12: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ವ್ಯಾಪಕವಾಗಿ ಕಂಡು ಬರುತ್ತಿದ್ದು, ಸೋಂಕಿಗೆ ಬಲಿಯಾಗುವವರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ಐವರು ಕೊರೊನಾಗೆ ಬಲಿಯಾಗುವ ಮೂಲಕ ಕೋವಿಡ್‌ಗೆ ಬಲಿಯಾಗುತ್ತಿರುವವರ ಸಂಖ್ಯೆಯಲ್ಲೂ ಹೆಚ್ಚಳ ಕಂಡುಬರುತ್ತಿದೆ. ಇಂದು ಒಂದೇ ದಿನ ಮತ್ತೆ ಐವರು ಕೊರೋನಕ್ಕೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 46ಕ್ಕೆ ಏರಿಕೆಯಾಗಿದೆ.

ಮಂಗಳೂರಿನ ಉರ್ವಾಸ್ಟೋರ್ ನ 72 ವರ್ಷದ ವೃದ್ಧ, ಬಳ್ಳಾಲ್‌ಭಾಗ್ ನಿವಾಸಿ 60 ವರ್ಷದ ವೃದ್ಧೆ, ಬಂದರು ನಿವಾಸಿ 68 ವರ್ಷದ ವೃದ್ಧೆ, ಬೆಳ್ತಂಗಡಿಯ ಪಿಲಿಚಾಮುಂಡಿಕಲ್ಲು ನಿವಾಸಿ 60 ವರ್ಷದ ವೃದ್ಧ, ಪುತ್ತೂರಿನ ಮೂಲಡ್ಕದ 50 ವರ್ಷದ ವ್ಯಕ್ತಿ ಕೂರೊನಾಗೆ ಬಲಿಯಾಗಿದ್ದಾರೆ.

ಈ ಪೈಕಿ ನಾಲ್ವರು ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಪುತ್ತೂರು ಮೂಲದ ಸೋಂಕಿತ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.

ಸದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ  46ಕ್ಕೇರಿಕೆಯಾಗಿದೆ.

Comments are closed.