ಕರಾವಳಿ

ದ.ಕ.ಜಿಲ್ಲೆಯಲ್ಲಿ ಗುರುವಾರ ಕೊರೋನಾ ಮಹಾಸ್ಫೋಟ : 238 ಮಂದಿಯಲ್ಲಿ ಸೋಂಕು ಪತ್ತೆ

Pinterest LinkedIn Tumblr

ಮಂಗಳೂರು, ಜುಲೈ.16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು ಗುರುವಾರ ಮತ್ತೊಮ್ಮೆ ಕೊರೋನಾ ಮಹಾಸ್ಫೋಟ ಗೊಂಡಿದ್ದು, ದಾಖಲೆಯ ಅತೀ ಹೆಚ್ಚು 238 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ ದೃಢಪಟ್ಟ ಕೊರೊನಾ ಸೋಂಕು ಪ್ರಕರಣಗಳಲ್ಲಿ ಗುರುವಾರ ಮತ್ತೊಮ್ಮೆ ಹೆಚ್ಚಿನ ಪ್ರಕರಣಗಳು ದಾಖಲಾಗಿದೆ. ಬುಧವಾರ ಜಿಲ್ಲೆಯಲ್ಲಿ 73 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2525 ಇತ್ತು. ಆದರೆ ಇಂದು ಒಂದೇ ದಿನ 238 ಮಂದಿಯಲ್ಲಿ ಸೋಂಕು ಪತ್ತೆಯಾಗುವ ಮೂಲಕ ಸೋಕಿತರ ಸಂಖ್ಯೆ 2763ಕ್ಕೆ ಏರಿಕೆಯಾಗಿದೆ.

ದ.ಕ. ಜಿಲ್ಲೆಯಲ್ಲಿ ಇಂದು ಒಂದೇ ದಿನ ಅತ್ಯಧಿಕ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ಏಕಾಏಕಿ ಸೋಂಕು ಹರಡುವ ಸ್ವರೂಪವೇ ಬದಲಾಗಿಬಿಟ್ಟಿದೆ. 106 ಮಂದಿಯಲ್ಲಿ ಐಎಲ್ಐ ಪ್ರಕರಣ ಪತ್ತೆಯಾಗಿದ್ದು, 73 ಮಂದಿಯ ಸೋಂಕಿನ ಮೂಲ ಪತ್ತೆಯಾಗಿಲ್ಲ. ಉಳಿದಂತೆ ಪ್ರಾಥಮಿಕ ಸಂಪರ್ಕದಿಂದ 23 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, ವಿದೇಶದಿಂದ ಬಂದ 19 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 17 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಗುರುವಾರದಂದು 74 ಮಂದಿ ಕೊರೊನಾ ಮುಕ್ತರಾಗಿದ್ದು, ಜಿಲ್ಲೆಯಲ್ಲಿ ಇಲ್ಲಿಯ ತನಕ 1163 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.

ಗುರುವಾರದ ಪ್ರಮುಖ ಅಂಶಗಳು :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ದಾಖಲೆಯ ಅತ್ಯಧಿಕ ಕೊರೋನಾ ಪಾಸಿಟಿವ್ ಪತ್ತೆ

ಇಂದು ಒಂದೇ ದಿನ ಜಿಲ್ಲೆಯಲ್ಲಿ ಬರೋಬ್ಬರಿ 238 ಮಂದಿಗೆ ಕೊರೋನಾ

ILI – 106 ಮಂದಿಗೆ ಕೊರೋನಾ ಪಾಸಿಟಿವ್

ಸಂಪರ್ಕವೇ ಪತ್ತೆಯಾಗದ 73 ಮಂದಿಗೆ ಕೊರೋನಾ ಪಾಸಿಟಿವ್

ಪ್ರಾಥಮಿಕ ಸಂಪರ್ಕದಿಂದ 23 ಮಂದಿಗೆ ಕೊರೋನಾ ಪಾಸಿಟಿವ್

ವಿದೇಶದಿಂದ ಬಂದ 19 ಜನರಿಗೆ ಕೊರೋನಾ ಸೋಂಕು ದೃಢ

SARI – 17 ಮಂದಿಗೆ ಕೊರೋನಾ ಪಾಸಿಟಿವ್

ದ.ಕ ಜಿಲ್ಲೆಯಲ್ಲಿ ಒಬ್ಬರಿಂದ ಒಬ್ಬರಿಗೆ ವೇಗವಾಗಿ ಹರಡುತ್ತಿರುವ ಕೊರೋನಾ ಸೋಂಕು

Comments are closed.