ಕರ್ನಾಟಕ

ಗಂಗಾವತಿಯ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೆ ಕೊರೊನಾ

Pinterest LinkedIn Tumblr


ಕೊಪ್ಪಳ: ಜಿಲ್ಲೆಯ ಗಂಗಾವತಿಯ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಅವರ ಪ್ರಾಥಮಿಕ ಸಂಪರ್ಕದಲ್ಲಿ ಇಬ್ಬರು ಕಾಂಗ್ರೆಸ್‌ ಶಾಸಕರು ಇದ್ದಾರೆ ಎಂಬುದು ತಿಳಿದುಬಂದಿದೆ.

ನಗರದ ಜಿಲ್ಲಾಡಳಿತ ಭವನದಲ್ಲಿ ಜು.16 ರಂದು ಜರುಗಿದ ಕೊರೊನಾ ವೈರಸ್‌ ನಿಯಂತ್ರಣ ಕುರಿತ ಸಭೆಯಲ್ಲಿ ಶಾಸಕ ಪರಣ್ಣ ಮುನವಳ್ಳಿ ಸೇರಿ, ಸಂಸದ, ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಪರಣ್ಣ ಮುನವಳ್ಳಿ ಅವರ ಅಕ್ಕಪಕ್ಕದಲ್ಲಿಯೇ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್‌, ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಕುಳಿತಿದ್ದರು. ಈಗಾಗಲೇ ರಾಘವೇಂದ್ರ ಹಿಟ್ನಾಳ್ ಅವರ ಕಚೇರಿ ಪ್ರಕಟಣೆ ನೀಡಿದ್ದು, 15 ದಿನದವರೆಗೆ ಶಾಸಕರು ಲಭ್ಯವಿರುವುದಿಲ್ಲ ಎಂದು ತಿಳಿಸಿದೆ.

ಕೊರೊನಾ ವೈರಸ್‌ ನಿರ್ವಹಣೆ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲರೂ ಶಾಸಕರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದಾರೆ. ಇವರನ್ನು ಹೊರತುಪಡಿಸಿ ಮತ್ಯಾರು ಶಾಸಕರ ಪ್ರಾಥಮಿಕ ಸಂಪರ್ಕದಲ್ಲಿದ್ದಾರೆ ಎಂಬುದನ್ನು ತನಿಖೆ ನಡೆಸುತ್ತಿದ್ದು, ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

Comments are closed.