ಕರಾವಳಿ

ಉಡುಪಿ ಒಂದೇ ಮನೆಯ ಐವರಲ್ಲಿ ಸೋಂಕು ಪತ್ತೆ: ಅಂಗಡಿ, ಮನೆಗಳು ಸೀಲ್ ಡೌನ್

Pinterest LinkedIn Tumblr

ಉಡುಪಿ: ಜಿಲ್ಲೆಯ ಬಾರಕೂರು ರಥ ಬೀದಿಯ ಒಂದೇ ಮನೆಯ ಐವರರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ 13 ಮನೆಗಳು ಸೇರಿದಂತೆ 19 ಅಂಗಡಿಗಳನ್ನು ಸೀಲ್ ಡೌನ್ ಮಾಡಲಾಗಿದೆ.

ಬಾರಕೂರು ರಥ ಬೀದಿಯಲ್ಲಿನ ಮನೆಯೊಂದರಲ್ಲಿ ವಾಸವಿರುವ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಬ್ರಹ್ಮಾವರ ತಾಲೂಕಿನ ಕೋಡಿಬೆಂಗ್ರೆ ನಿವಾಸಿ ವೃದ್ದೆಯೋರ್ವರು ಮಣಿಪಾಲದ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಗುಣಮುಖರಾಗಿ ಸಂಬಂಧಿಕರ ಮನೆಗೆ ಬರುತ್ತಿದ್ದಂತೆಯೇ ಅವರಲ್ಲಿ ಕೊರೊನಾ ಲಕ್ಷಣಗಳು ಕಂಡು ಬಂದಿದ್ದು, ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಇರುವುದು ದೃಢಪಟ್ಟಿದೆ.

ಅಲ್ಲದೆ ಮನೆಯ ಇಬ್ಬರು ಮಕ್ಕಳಿಗೆ ಜ್ವರ ಬಂದಿತ್ತು. ಅದೇ ರೀತಿ ಮಕ್ಕಳ ಪೋಷಕರನ್ನು ಟೆಸ್ಟ್ ಗೆ ಒಳಪಡಿಸಲಾಗಿದೆ. ಒಟ್ಟು ನಾಲ್ವರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಆ ಕಾರಣ ಸೀಲ್ ಡೌನ್ ಮಾಡಲಾಗಿದ್ದು, ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಯಿತು.

ಸ್ಥಳಕ್ಕೆ ಆರೋಗ್ಯಾಧಿಕಾರಿಗಳು, ಪೊಲೀಸ್ ಇಲಾಖೆಯವರು ಹಾಗೂ ಕಂದಾಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Comments are closed.