ಕರಾವಳಿ

ಉಡುಪಿ ಎಸ್ಪಿ ಕಚೇರಿ ಸಿಬ್ಬಂದಿಗೆ ಕೊರೋನ: ಕಚೇರಿ ಸ್ಯಾನಿಟೈಸ್ ಮಾಡಿದ್ದು ಬಂದ್ ಮಾಡಿಲ್ಲ-ಎಸ್ಪಿ ವಿಷ್ಣುವರ್ಧನ್

Pinterest LinkedIn Tumblr

ಉಡುಪಿ: ಉಡುಪಿ ಪೊಲೀಸ್ ವರಿಷ್ಟಾಧಿಕಾರಿ ಕಚೇರಿ ಸಿಬಂದಿಗೆ ಕೊರೋನಾ ಪಾಸಿಟಿವ್ ಕಂಡು ಬಂದ ಹಿನ್ನಲೆಯಲ್ಲಿ ಎಸ್ಪಿ ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಯಾವುದೇ ರೀತಿಯಾಗಿ ಸೀಲ್ ಡೌನ್ ಮಾಡಿಲ್ಲ ಎಂದು ಎಸ್ಪಿ ವಿಷ್ಣುವರ್ಧನ್ ಸ್ಪಷ್ಟನೆ ನೀಡಿದ್ದಾರೆ.

ಉಡುಪಿ ಎಸ್ಪಿ ಕಚೇರಿಯಲ್ಲಿರುವ ಸಿಬಂದಿಯೋರ್ವರಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದ್ದು, ಎಸ್ಪಿ ಕಚೇರಿಯನ್ನು ಕೋವಿಡ್ ನಿಯಮಾವಳಿಗಳ ಪ್ರಕಾರ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುತ್ತಿದೆ. ಅಲ್ಲದೇ ಕನಿಷ್ಠ ಸಿಬ್ಬಂದಿಯೊಂದಿಗೆ ಎಸ್ಪಿ ಕಚೇರಿಯ ಕಾರ್ಯಗಳ ನಿರ್ವಹಣೆ ನಡೆಯುತ್ತಿದೆ ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.

Comments are closed.