ಬೆಂಗಳೂರು: ನಮ್ಮ ಮೆಟ್ರೋ ರೈಲು ನಿಗಮ ವತಿಯಿಂದ ಶಿವಾಜಿನಗರದಲ್ಲಿ ಇಂದು ಆಯೋಜಿಸಲಾಗಿದ್ದ ಬೆಂಗಳೂರು ಮೆಟ್ರೋ 2ನೇ ಹಂತದ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ ಮತ್ತು ಶಿವಾಜಿನಗರ ಮೆಟ್ರೋ ನಿಲ್ದಾಣಗಳ ನಡುವೆ ಸುರಂಗ ಮಾರ್ಗ ನಿರ್ಮಾಣ ಕಾರ್ಯಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು.
ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ಶಿವಾಜಿನಗರದಲ್ಲಿ ಇಂದು ಸುರಂಗ ಮಾರ್ಗ ನಿರ್ಮಾಣ ಕಾರ್ಯಕ್ರಮವನ್ನು ಆಯೋಜಿಸಿತ್ತು.
ನಮ್ಮ ಮೆಟ್ರೋ ಎರಡನೇ ಹಂತದ ಸುರಂಗ ಮಾರ್ಗವು ಜಯನಗರ ಅಗ್ನಿಶಾಮಕ ಕೇಂದ್ರದ ಸಮೀಪವಿರುವ ದಕ್ಷಿಣ ರ್ಯಾಂಪ್ ನಿಂದ ನಾಗವಾರ ನಿಲ್ದಾಣದ ಬಳಿಯ ಉತ್ತರ ರ್ಯಾಂಪ್ ವರೆಗೆ ಸುಮಾರು 13.9 ಕಿ.ಮೀ ಸುರಂಗ ಮಾರ್ಗದ ಕಾರಿಡಾರ್ ಇದಾಗಿದೆ.
ಆರ್ ಟಿ 03 ಪ್ಯಾಕೇಜ್ ನಲ್ಲಿ ಕಂಟೋನ್ಮೆಂಟ್ ನಿಲ್ದಾಣದಿಂದ ಶಿವಾಜಿನಗರ ನಿಲ್ದಾಣಕ್ಕೆ ಮತ್ತು ಕಂಟೋನ್ಮೆಂಟ್ ನಿಲ್ದಾಣದಿಂದ ಟ್ಯಾನರಿ ರಸ್ತೆಯಲ್ಲಿರುವ ಶಾದಿ ಮಹಲ್ ವರೆಗೆ 2.88 ಕಿ.ಮೀ ಉದ್ದದ ಸುರಂಗ ಮಾರ್ಗ ಕಾಮಗಾರಿ ಒಳಗೊಂಡಿದೆ ಎಂದು ಬೆಂಗಳೂರು ಮೆಟ್ರೋ ಅಧಿಕಾರಿ ತಿಳಿಸಿದ್ದಾರೆ.
Comments are closed.