ಕರಾವಳಿ

ದ.ಕ.ಜಿಲ್ಲೆಯಲ್ಲಿ ಗುರುವಾರ 173 ಮಂದಿಗೆ ಪಾಸಿಟಿವ್ : ಸೋಂಕಿತರ ಸಂಖ್ಯೆ 6715ಕ್ಕೆ ಏರಿಕೆ

Pinterest LinkedIn Tumblr

ಮಂಗಳೂರು, ಆಗಸ್ಟ್.07 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಮತ್ತೆ 173 ಮಂದಿಗೆ ಸೋಂಕು ಧೃಢಪಟ್ಟಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಗುರುವಾರ ಸೋಂಕಿತರ ಸಂಖ್ಯೆ 6715ಕ್ಕೆ ಏರಿಕೆಯಾಗಿದೆ.

ಗುರುವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಪ್ರಕಟಿಸಿದ ಪ್ರಕಟಣೆಯಲ್ಲಿ ದ.ಕ. ಜಿಲ್ಲೆಯಲ್ಲಿ 173 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯಾಗಿದೆ.

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸೋಂಕು ಪೀಡಿತರ ಸಖ್ಯೆ ದಿಢೀರ್ ಏರಿಕೆಯಾಗಿದ್ದು,ಬುಧವಾರ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 6542 ಇತ್ತು. ಆದರೆ ಗುರುವಾರ ಮತ್ತೆ 173 ಮಂದಿಯಲ್ಲಿ ಸೋಂಕು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 6715ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಏಕಾಏಕಿ ಸೋಂಕು ಹರಡುವ ಸ್ವರೂಪವೇ ಬದಲಾಗಿಬಿಟ್ಟಿದೆ. ಆತಂಕಕಾರಿ ವಿಚಾರವೆಂದರೆ ಸೋಂಕಿನ ಮೂಲವೇ ಪತ್ತೆಯಾಗದವರ ಸಂಖ್ಯೆ (50)ಮತ್ತೆ ಮುಂದುವರಿದಿದೆ.

ಹೊಸದಾಗಿ ಸೋಂಕು ಪತ್ತೆಯಾದ 179 ಮಂದಿಯಲ್ಲಿ ಮಂಗಳೂರು ತಾಲೂಕಿನವರು 119 ಜನ. ಉಳಿದಂತೆ ಬಂಟ್ವಾಳದ 21 ಮಂದಿ, ಪುತ್ತೂರಿನ 13, ಸುಳ್ಯದ ಐವರು, ಬೆಳ್ತಂಗಡಿ ಹಾಗೂ ಮೂಡುಬಿದಿರೆಯ ತಲಾ ನಾಲ್ವರು, ಕಡಬದ ಇಬ್ಬರು, ಮುಲ್ಕಿಯ ಓರ್ವ ಸೇರಿದಂತೆ ಹೊರಜಿಲ್ಲೆಯ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ.

ಗುರುವಾರದಂದು 107 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನು ದ.ಕ. ಜಿಲ್ಲೆಯಲ್ಲಿ 3398 ಸಕ್ರಿಯ ಪ್ರಕರಣಗಳಿವೆ. ಇನ್ನು ಇಲ್ಲಿಯ ತನಕ ದ.ಕ. ಜಿಲ್ಲೆಯಲ್ಲಿ ಒಟ್ಟು 6715 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ಇಲ್ಲಿಯ ತನಕ ಒಟ್ಟು 3116 ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದ್ದಾರೆ.

ಗುರುವಾರ ಪತ್ತೆಯಾದ ಪ್ರಕರಣಗಳ ಪೈಕಿ 83 ಐಎಲ್‌ಐ ಕೊರೊನಾ ಕೇಸ್ ಗಳಾಗಿವೆ. ಜಿಲ್ಲೆಯಲ್ಲಿ 13 ಮಂದಿಗೆ ಸಾರಿ ಪ್ರಕರಣ ಪತ್ತೆಯಾಗಿದೆ. 23 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. 50 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ನಾಲ್ವರು ವಿದೇಶದಿಂದ ಬಂದವರಲ್ಲಿ ಸೋಂಕು ದೃಢಪಟ್ಟಿದೆ.

ಗುರುವಾರದ ಪ್ರಮುಖ ಅಂಶಗಳು :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 173 ಮಂದಿಗೆ ಕೊರೋನಾ ಪಾಸಿಟಿವ್

ಮಂಗಳೂರು ತಾಲೂಕಿನ‌ 119 ಮಂದಿಗೆ ಕೊರೋನಾ ಪಾಸಿಟಿವ್

ಬಂಟ್ವಾಳದ 21, ಪುತ್ತೂರಿನ 13, ಸುಳ್ಯದ 5, ಬೆಳ್ತಂಗಡಿಯ 4, ಮೂಡಬಿದ್ರೆಯ 4 ,ಕಡಬದ 2, ಮುಲ್ಕಿಯ 1 ಹಾಗೂ ಹೊರ ಜಿಲ್ಲೆಯಿಂದ ಬಂದ 4 ಮಂದಿಗೆ ಕೊರೋನಾ ಪಾಸಿಟಿವ್

ILI ಪ್ರಕರಣದಲ್ಲಿ 83, ಸಂಪರ್ಕವೇ ಪತ್ತೆಯಾಗದ 50, ಪ್ರಾಥಮಿಕ ಸಂಪರ್ಕದಿಂದ 23, SARI ಪ್ರಕರಣದಿಂದ 13 ಹಾಗೂ ವಿದೇಶದಿಂದ ಬಂದ ನಾಲ್ವರಿಗೆ ಕೊರೋನಾ ಪಾಸಿಟಿವ್

ಮಂಗಳೂರು‌ ನಗರದಲ್ಲೇ ಹೆಚ್ಚಾಗುತ್ತಿರುವ ಕೊರೋನಾ‌ ಪಾಸಿಟಿವ್

ಜಿಲ್ಲೆಯಲ್ಲಿ ಈವರೆಗೆ ಒಟ್ಟು 6,715 ಮಂದಿಗೆ ಕೊರೋನಾ‌ ಪಾಸಿಟಿವ್.

Comments are closed.