ಕರಾವಳಿ

ಉಡುಪಿಯಲ್ಲಿ ಸ್ವಾತಂತ್ರ್ಯೋತ್ಸವ: ಸಾರ್ವಜನಿಕರ ವೀಕ್ಷಣೆಗೆ ವೆಬ್ ಕಾಸ್ಟ್ ಹಾಗೂ ಫೇಸ್ಬುಕ್ ಲೈವ್!

Pinterest LinkedIn Tumblr

ಉಡುಪಿ: ಉಡುಪಿಯ ಮಹಾತ್ಮಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ, ಜಿಲ್ಲಾಧಿಕಾರಿ ಜಿ.ಜಗದೀಶ್ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು.

ಪೊಲೀಸ್, ಅರಣ್ಯ ಇಲಾಖೆ, ಗೃಹರಕ್ಷಕದಳ ಮತ್ತು ಎನ್.ಸಿ.ಸಿ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಿತು. ಕಾರ್ಯಕ್ರಮದಲ್ಲಿ ಕೊರೋನಾ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ 24 ಮಂದಿ ಕೊರೋನಾ ವಾರಿಯರ‍್ಸ್ ಗಳನ್ನು ಸನ್ಮಾನಿಸಲಾಯಿತು.

ಉಡುಪಿ ಜಿಲ್ಲಾ ಪಂಚಾಯತ್ ವತಿಯಿಂದ ಸ್ವಚ್ಛ ಭಾರತ್ ಮಿಷನ್ (ಗ್ರಾ) ದಲ್ಲಿ ಸಾಧಿಸಿರುವ ಪ್ರಗತಿ ಕುರಿತು ಕಿರು ಪುಸ್ತಕವನ್ನುಬಿಡುಗಡೆಗೊಳಿಸಲಾಯಿತು.

ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕ ರಘುಪತಿಭಟ್, ಉಡುಪಿ ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಉಡುಪಿ ತಾ.ಪಂ. ಅಧ್ಯಕ್ಷೆ ಸಂಧ್ಯಾ ಕಾಮತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋತ್, ಎಸ್ಪಿ ವಿಷ್ಣುವರ್ಧನ್, ಕರಾವಳಿ ಕಾವಲು ಪಡೆ ಎಸ್ಪಿ ಚೇತನ್ , ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.

ಕೋವಿಡ್-19 ಹಿನ್ನಲೆಯಲ್ಲಿ ಸರ್ಕಾರದ ಮಾರ್ಗಸೂಚಿಯನ್ವಯ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರದಲ್ಲಿ ಆಸನಗಳನ್ನು ಅಳವಡಿಸಿದ್ದು , ಕ್ರೀಡಾಂಗಣಕ್ಕೆ ಆಗಮಿಸುವ ಪ್ರತಿಯೊಬ್ಬರನ್ನೂ ಮಾಸ್ಕ್ ಧರಿಸಿರುವುದನ್ನು ಪರೀಕ್ಷಿಸಿ , ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷಿಸಿ ಹಾಗೂ ಸ್ಯಾನಿಟೈಸರ್ ನೀಡುವ ಮೂಲಕ ಪ್ರವೇಶ ನೀಡಲಾಯಿತು.

ಕಾರ್ಯಕ್ರಮದ ನೇರ ಪ್ರಸಾರವನ್ನು , ವೆಬ್ ಕಾಸ್ಟ್ ಹಾಗೂ ಫೇಸ್ಬುಕ್ ಮೂಲಕ ಸಾರ್ವಜನಿಕರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.

Comments are closed.