ರಾಷ್ಟ್ರೀಯ

ಒಂದೇ ತಿಂಗಳಲ್ಲಿ 4,300 ರೂ. ಇಳಿಕೆ ಕಂಡ ಚಿನ್ನದ ಬೆಲೆ

Pinterest LinkedIn Tumblr


ಕೊರೋನಾ ವೈರಸ್​ ಹರಡುವಿಕೆ ಹೆಚ್ಚಿದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಜನರು ಚಿನ್ನದ ಮೇಲೆ ಹೂಡಿಕೆ ಮಾಡಲು ಮುಂದೆ ಬಂದಿದ್ದರು. ಈಗ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಈ ಮಧ್ಯೆ ಚಿನ್ನದ ಬೆಲೆ ಇಳಿಕೆ ಕಾಣಲು ಆರಂಭಿಸಿದೆ. ಸತತ ನಾಲ್ಕನೇ ದಿನ ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನ ಇಳಿಕೆ ಕಂಡಿದೆ. ಈ ಇಳಿಕೆ ಹೀಗೆಯೇ ಮುಂದುವರಿಯಲಿದ್ದು, ಅಕ್ಟೋಬರ್​ ವೇಳೆಗೆ ಚಿನ್ನದ ದರದಲ್ಲಿ ಭಾರೀ ಇಳಿಕೆ ಕಾಣುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕಳೆದ ನಾಲ್ಕು ದಿನಗಳಲ್ಲಿ ಚಿನ್ನದ ಬೆಲೆ 10 ಗ್ರಾಂಗೆ ಸುಮಾರು 1700 ರೂಪಾಯಿ ಇಳಿಕೆ ಕಂಡಿದೆ. ಒಂದೇ ತಿಂಗಳಲ್ಲಿ ಚಿನ್ನದ ಬೆಲೆಯಲ್ಲಿ 4,300 ರೂ. ಇಳಿಕೆ ಕಂಡಿದೆ. ಇಂದು, ಅಮೆರಿಕ ಡಾಲರ್​ನಲ್ಲಿ ಯಾವುದೇ ಏರಿಳಿತ ಕಾಣದ ಹೊರತಾಗಿಯೂ ಚಿನ್ನದ ದರದಲ್ಲಿ ಇಳಿಕೆ ಕಂಡಿದೆ.

ಅನೇಕ ವಿಚಾರಗಳು ಚಿನ್ನದ ಬೆಲೆಯನ್ನು ನಿರ್ಧರಿಸುತ್ತವೆ. ಹಣ ದುಬ್ಬರ, ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಲೆ, ಬಡ್ಡಿ ದರ, ಜ್ಯುವೆಲರಿ ಮಾರುಕಟ್ಟೆ ಮತ್ತು ವ್ಯಾಪಾರ ಯುದ್ಧಗಳು ಚಿನ್ನದ ಬೆಲೆ ಏರಿಳಿತಕ್ಕೆ ನೇರ ಕಾರಣವಾಗುತ್ತವೆ. ಸದ್ಯ ಕೊರೋನಾ ವೈರಸ್​ ಇರುವುದರಿಂದ ಜನರಿಗೆ ಬೇರೆಲ್ಲೂ ಹೂಡಿಕೆ ಮಾಡಲು ಕ್ಷೇತ್ರಗಳು ಸಿಗುತ್ತಿಲ್ಲ. ಹೀಗಾಗಿ, ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಇದರಿಂದ ಸಹಜವಾಗಿಯೇ ಚಿನ್ನದ ದರದಲ್ಲಿ ಏರಿಕೆ ಕಂಡಿತ್ತು. ಈಗ ಬೇರೆ ಬೇರೆ ಕ್ಷೇತ್ರಗಳು ಮತ್ತೆ ತೆರೆದುಕೊಳ್ಳುತ್ತಿದ್ದು, ಜನರು ಚಿನ್ನ ಖರೀದಿ ಕಡಿಮೆ ಮಾಡಿದ್ದಾರೆ.

ಮತ್ತೆ ಏರಿಕೆ ಕಾಣಲಿದೆ ಚಿನ್ನ?:
ವಿಶ್ವದ ಆರ್ಥಿಕತೆ ತಲೆಕೆಳೆಗಾಗಿದೆ. ಹೀಗಾಗಿ ಯಾವ ಮಾರುಕಟ್ಟೆಯ ಮೇಲೂ ಖಚಿತವಾಗಿ ಏನನ್ನೂ ಹೇಳಲೂ ಸಾಧ್ಯವಾಗುತ್ತಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಚಿನ್ನದ ದರ ಏರಿಕೆ ಆಗಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ.

Comments are closed.