ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ವೆಬ್ ಸೈಟ್ ಹಾಗೂ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ.
2.5 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟರ್ ಖಾತೆಯನ್ನು ಇಂದು ಮುಂಜಾನೆ 3.15 ರ ಸುಮಾರಿಗೆ ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಈ ಕುರಿತು ಮಾಹಿತಿ ನೀಡಿರುವ ಟ್ವೀಟರ್, ಗುರುವಾರ ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ತಿಳಿಸಿದ್ದು ಈ ಟ್ವಿಟ್ಟರ್ ಖಾತೆ ಜಾನ್ ವಿಕ್ ಎಂಬಾತನಿಂದ ಹ್ಯಾಕ್ ಮಾಡಲಾಗಿದೆ ಎಂದೂ ಟ್ವೀಟ್ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯರ ವೈಯಕ್ತಿಕ ವೆಬ್ ಸೈಟ್ ಗೆ ಲಿಂಕ್ ಆಗಿರುವ ಈ ಟ್ವಿಟ್ಟರ್ ಖಾತೆ ಸುಮಾರು 2.5 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದೆ.
Comments are closed.