ಬೆಂಗಳೂರು: ಸ್ಯಾಂಡಲ್ ವುಡ್ ನಟಿ ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ ಆಪ್ತ ರವಿ ಶಂಕರ್ ಎಂಬಾತನನ್ನು ಡ್ರಗ್ಸ್ ಕೇಸಿನಲ್ಲಿ ವಶಕ್ಕೆ ಪಡೆದ ಬೆನ್ನಲ್ಲೇ ಮತ್ತೊಬ್ಬ ನಟಿ ಸಂಜನಾ ಗಲ್ರಾನಿಯ ಆಪ್ತ ರಾಹುಲ್‍ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ವಿಡಿಯೋ ಸಾಕ್ಷ್ಯ ಸೇರಿ ಹಲವು ಪ್ರಮುಖ ಮಾಹಿತಿ ಲಭ್ಯವಾಗಿದೆ ಎನ್ನಲಾಗುತ್ತಿದೆ.
ನಟಿ ಸಂಜನಾ ಆಪ್ತ ರಾಹುಲ್ ನನ್ನು ಡ್ರಗ್ಸ್ ದಂಧೆ ಕೇಸ್ ಸಂಬಂಧ ವಶಕ್ಕೆ ಪಡೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಸಂಜನಾ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ನಂಟಿನ ಬಗ್ಗೆ ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿದ್ದು. ಹಲವು ಸ್ಪೋಟಕ ಮಾಹಿತಿಗಳು ಹೊರ ಬೀಳುತ್ತಿದೆ. ನಿರ್ದೇಶಕ ಇಂದ್ರಜಿತ್ ಲಂಕೇಶ್ ಸಿಸಿಬಿ ಎದುರು ಹಲವು ಸ್ಪೋಟಕ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ. ಇಂದು ಕೂಡ ಇಂದ್ರಜಿತ್ ವಿಚಾರಣೆಯನ್ನು ಸಿಸಿಬಿ ಮಾಡುತ್ತಿದೆ.
Comments are closed.