ಕರ್ನಾಟಕ

ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಗೌಡ ಕೊರೋನಾಗೆ ಬಲಿ

Pinterest LinkedIn Tumblr

ಶಿವಮೊಗ್ಗ: ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಗೌಡ (67) ಅವರು ಕೋವಿಡ್‌ನಿಂದಾಗಿ ಬುಧವಾರ ರಾತ್ರಿ ನಿಧನರಾದರು.

ಮೂರು ದಿನಗಳ ಹಿಂದೆ ತೀವ್ರ ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅಪ್ಪಾಜಿಗೌಡ ಅವರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಅವರಿಗೆ ಪತ್ನಿ, ಒಬ್ಬ ಪುತ್ರ, ಒಬ್ಬ ಪುತ್ರಿ ಇದ್ದಾರೆ. ಮೆಗ್ಗಾನ್ ಆಸ್ಪತ್ರೆಯ ಎದುರು ಜನ ಸಾಗರವೇ ನೆರೆದಿದೆ. ಸೂಕ್ತ ಸಮಯದಲ್ಲಿ ಬೆಡ್ ಸಿಗಲಿಲ್ಲ ಎಂದು ಅನುಯಾಯಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ವಿಐಎಸ್‌ಎಲ್‌ ನೌಕರರಾಗಿ ಜೀವನ ಆರಂಭಿಸಿದ್ದ ಅವರು ಕಾರ್ಮಿಕ ನಾಯಕರಾಗಿ ಬೆಳೆದು ನಂತರ ರಾಜಕೀಯ ಕ್ಷೇತ್ರದಲ್ಲಿ ಬೆಳೆದಿದ್ದರು.

ಮಾಜಿ ಶಾಸಕರು ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಕೊರೊನಾವನ್ನು ಲೆಕ್ಕಿಸದೇ ಆಸ್ಪತ್ರೆ ಮುಂದೆ ಸಾವಿರಾರು ಸಂಖ್ಯೆಯಲ್ಲಿ ಅವರ ಅನುಯಾಯಿಗಳು ಜಮಾಯಿಸಿದ್ದರು. ನಂತರ ಮಧ್ಯರಾತ್ರಿ 2 ಗಂಟೆಗೆ ಪಾರ್ಥಿವ ಶರೀರವನ್ನು ಭದ್ರಾವತಿಯ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತು.

Comments are closed.